ಭದ್ರಾವತಿಯ ದೇವಸ್ಥಾನದಲ್ಲಿ ನೆನ್ನೆ ದಿವಸ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಹನುಮಂತಪ್ಪ ಕಾಲೊನಿಯ ಅರ್ಚಕ ಬಿ.ಕೆ. ಲಕ್ಷ್ಮೀಕಾಂತ (50) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪೂಜೆ ಮುಗಿಸಿ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕಾರು ರಾಮಿನಕೊಪ್ಪ ಕ್ರಾಸ್ ಬಳಿ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಇವರು ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕೃಷ್ಣ ದೇವಸ್ಥಾನ ಮತ್ತು ಬಿ.ಬಿ. ಮೈನ್ಸ್ ಹತ್ತಿರದ ರಂಗನಾಥಸ್ವಾಮಿ ದೇವಸ್ಥಾನಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.