ಉಡುಪಿ ಜಿಲ್ಲೆಯ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಾರoಬಳ್ಳಿ, ಹಂದಾಡಿ, ಚಾಂತಾರು, ಹಾರಾಡಿ ಗ್ರಾಮ ಪಂಚಾಯತ್ ಎದುರುಎದುರು ಇಂದು ಪ್ರತಿಭಟನಾ ಸಭೆ ನಡೆಯಿತು.
“ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ”ದ ಭಾಗವಾಗಿ ಈ ಪ್ರತಿಭಟನೆ ಆಯೋಜಿಸಿದ್ದು, 9/11 ಸಮಸ್ಯೆ, ಅಕ್ರಮ ಸಕ್ರಮ 53 ಮತ್ತು 57 ಅರ್ಜಿಗಳ ತಿರಸ್ಕಾರ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯ ರದ್ದತಿ, ಹಾಗೂ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಜನರಿಗೆ ವಾಸ್ತವ ವಿಚಾರಗಳನ್ನು ತಿಳಿಸುವುದು ಕಾಂಗ್ರೆಸ್‌ನ ಮುಖ್ಯ ಉದ್ದೇಶವಾಗಿತ್ತು
ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷರು ಪ್ರಖ್ಯಾತ್ ಶೆಟ್ಟಿ, ಅಮೃತ ಶೇನೋಯ್, ಕೀರ್ತಿ ಶೆಟ್ಟಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ, ಬ್ಲಾಕ್ ಅಧ್ಯಕ್ಷರು ರಾಘವೇಂದ್ರ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಭುಜಂಗ ಶೆಟ್ಟಿ,ಗೋಪಿ ಕೆ ನಾಯ್ಕ್, ಹಿರಿಯ ಮುಖಂಡರಾದ ಮೈರ್ಮಾಡಿ ಸುಧಾಕರ್ ಶೆಟ್ಟಿ ಸ್ಥಳೀಯ ನಾಯಕರಾದ ಪ್ರಶಾಂತ್ ಸುವರ್ಣ, ಮಹೇಶ್ ಮೊಯಿಲಿ, ನವೀನ್ ಬಂಗೇರ ಉದಯ್ ಆಚಾರ್ಯ, ಭುವನೇಶ್ ಕರ್ಜೆ, ಹರೀಶ್ ಶೆಟ್ಟಿ ಕರ್ಜೆ, ಕುಮಾರ್ ಸುವರ್ಣ, ಸೂರ್ಯ ಸಾಲಿಯಾನ್, ಯುವ ಕಾಂಗ್ರೆಸ್ ಮುಖಂಡರು, ಮಹಿಳಾ ಕಾಂಗ್ರೆಸ್ ಮುಖಂಡರು, ಬ್ಲಾಕ್ ಪದಾಧಿಕಾರಿಗಳು, ಜಿಲ್ಲಾ ಮುಖಂಡರು ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.