ಚಿಕ್ಕಬಳ್ಳಾಪುರ | ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

Date:

Advertisements

ರಾಜ್ಯ ಸರಕಾರ ಕೇವಲ ಶೇ.1ರಷ್ಟು ಮೀಸಲಾತಿ ಕೊಟ್ಟು, ಅದನ್ನೂ ಜಾರಿ ಮಾಡದೆ ಲಿಂಗ ಅಲ್ಪಸಂಖ್ಯಾತರನ್ನು ನಿರ್ಲಕ್ಷ್ಯ ಮಾಡುತ್ತಿದೆ. ತಕ್ಷಣ ಲೈಂಗಿಕ ಅಲ್ಪಸಂಖ್ಯಾತರ ಹಿತರಕ್ಷಣೆಗೆ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಜೀವ ಮತ್ತು ನಿಸರ್ಗ ಸೊಸೈಟಿಯ ಪಿ.ಉಮಾ ಆಗ್ರಹಿಸಿದರು.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲರಂತೆ ಸಮಾಜದಲ್ಲಿ ಸಮಾನವಾಗಿ ಬದುಕುವ ಹಕ್ಕು ಲಿಂಗತ್ವ ಅಲ್ಪಸಂಖ್ಯಾತರಿಗೂ ಇದೆ. ಆದ್ದರಿಂದ ಮೂಲಸೌಕರ್ಯ ಕಲ್ಪಿಸಲು ಸರಕಾರಗಳು ಮುಂದಾಗಬೇಕು. ಲೈಂಗಿಕ ಅಲ್ಪಸಂಖ್ಯಾತರು, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಕಳಂಕ, ತಾರತಮ್ಯ, ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿದೆ ಎಂದು ನೋವು ತೋಡಿಕೊಂಡರು.

ರಾಜ್ಯದಲ್ಲಿ 60 ಸಾವಿರಕ್ಕೂ ಹೆಚ್ಚು ಲಿಂಗತ್ವ ಅಲ್ಪಸಂಖ್ಯಾತರರಿದ್ದು, ಇವರಿಗೆ ರಾಜ್ಯ ಸರಕಾರದಿಂದ ಸಂವಿಧಾನಿಕವಾಗಿ ಸಿಗಬೇಕಾದ
ಯಾವುದೇ ಸೌಲಭ್ಯ ಸಿಗುತ್ತಿಲ್ಲ, ಬೇರೆ ರಾಜ್ಯಗಳಲ್ಲಿ ಕಲ್ಯಾಣ ಮಂಡಳಿಗಳನ್ನು ಸ್ಥಾಪಿಸಿ ಹಣ ಮೀಸಲಿಟ್ಟಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಆಗಿಲ್ಲ ಎಂದು ಹೇಳಿದರು.

Advertisements

ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣ ಹೋರಾಟಗಾರ ಕಿರಣ್ ನಾಯಕ್‌ ಮಾತನಾಡಿ, ರಾಜ್ಯ ಸರಕಾರ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವನ್ನು ಗುರುತಿಸುವ ಜತೆಗೆ ಲಿಂಗತ್ವ ಅಲ್ಪಸಂಖ್ಯಾತರ ರಾಜ್ಯ ಕಲ್ಯಾಣ ನಿಗಮ ಸ್ಥಾಪಿಸಿ ಅಭಿವೃದ್ಧಿಗೆ ಹಣ ಮೀಸಲಿಡಬೇಕು ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಸರಕಾರಿ ಕೆಲಸದಲ್ಲಿ ಶೇ.1 ಮೀಸಲು ನೀಡಲಾಗಿದೆ ಎಂದು ಹೇಳುತ್ತಿದೆ. ಆದರೆ ಜಾರಿ ಮಾಡುತ್ತಿಲ್ಲ.ವಸತಿ ಯೋಜನೆಗಳಲ್ಲಿ ನಮ್ಮನ್ನು
ಪರಿಗಣಿಸುತ್ತಿಲ್ಲ. ಕೇವಲ ವಸತಿ ರಹಿತರ ಪಟ್ಟಿ ಪಡೆದು ಮೂಲೆಗೆ ಎಸೆಯುತ್ತಿದೆ. ಕೆಲವರಿಗೆ ಜಾಗ ಕೊಟ್ಟಿದೆ ಎಂದು ಹೇಳುತ್ತಿದ್ದಾರೆ ಯಾದರೂ ಜಾಗ ಎಲ್ಲಿದೆ ಎಂದು ತೋರಿಸುವವರೇ ಇಲ್ಲ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಒದಗಿಸಬೇಕು. ವಸತಿ ನಿವೇಶನಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ವೆಂಕಟರೆಡ್ಡಿ, ಸುಷ್ಮಾ, ಶಮೀರಾ, ವೇಣು, ಮೌಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X