ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ. ಬಂಧಿತನನ್ನು ಮಂಗಳೂರಿನ ತೌಹೀದ್ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಸಂಜೆ ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ ಆರೋಪಿಯು ತನ್ನ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿ ಜತೆಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ವಿದ್ಯಾರ್ಥಿನಿ ತಂದೆಗೆ ಪೋನ್ ಮುಖಾಂತರ ಮಾಹಿತಿ ತಿಳಿಸಿದ್ದಾಳೆ. ಬಸ್ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ತಲುಪಿದಾಗ ಆರೋಪಿಯು ಬಸ್‌ನ ತುರ್ತು ನಿರ್ಗಮನ ಕಿಟಕಿಯ ಮೂಲಕ ಇಳಿಯಲು ಪ್ರಯತ್ನಿಸಿದಾಗ ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಮಂಗಳೂರು | ಸುರತ್ಕಲ್ ಎನ್‌ಐಟಿಕೆಯಲ್ಲಿ ಕೃಷ್ಣಾ ನದಿ ಜಲಾನಯನ ನಿರ್ವಹಣಾ ಅಧ್ಯಯನಗಳ ಕುರಿತು ಕಾರ್ಯಾಗಾರ
ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.