ಮಂಡ್ಯ ನಗರ ಯೋಜನೆ ಅನುಮೋದನೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯ ನಗರ ಮತ್ತು ಗ್ರಾಮಾಂತರ ಯೋಜನೆ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
₹30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ ₹15 ಸಾವಿರ ರೂಪಾಯಿ ಲಂಚ ಪಡೆಯುವಾಗ ಮಂಡ್ಯ ನಗರ ಮತ್ತು ಗ್ರಾಮಾಂತರ ಯೋಜನೆ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ಅನನ್ಯ, ನಗರ ಯೋಜಕಿ ಸೌಮ್ಯ ಮತ್ತು ಹರೀಶ್ ರವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಪಘಾತ ತಡೆಗೆ ಪರಿಣಾಮಕಾರಿ ಸುರಕ್ಷತಾ ವ್ಯವಸ್ಥೆಗಳ ಅಳವಡಿಕೆ : ಶಿಲ್ಪಾ ನಾಗ್
ಲಂಚ ಬೇಡಿಕೆ ಇಟ್ಟಿರುವ ಕುರಿತಾಗಿ ಮದ್ದೂರು ತಾಲ್ಲೂಕು, ಚಂದೂಪುರ ನಿವಾಸಿ ಪುನೀತ್ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರ ಅನುಸಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯನ ಗೌಡ ನೇತೃತ್ವದ ತಂಡ ಸಾಕ್ಷಿ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಡ್ಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.