ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ,ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 26ರ ಶನಿವಾರದಂದು ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗದ ಪತ್ರಕರ್ತರ ಸಂಘದ ನಿರ್ದೇಶಕರಾದ ಸದಸ್ಯರಾದ ಎನ್ ರವಿಕುಮಾರ್ ತಿಳಿಸಿದರು.
ಶಿವಮೊಗ್ಗ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನೆಯನ್ನು ಸಂಸದ ಬಿ. ವೈ. ರಾಘವೇಂದ್ರ ನಡೆಸಲಿದ್ದಾರೆ. ದಿಕ್ಸೂಚಿ ಉಪನ್ಯಾಸವನ್ನು ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ನೆರವೇರಿಸುವರು. ಸಾಧಕ ಪತ್ರಕರ್ತರಿಗೆ ಸನ್ಮಾನ ನಡೆಯಲಿದ್ದು, ಇದರಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಕೂಡ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದನ್ನು ಓದಿದ್ದೀರಾ? ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಸಬಹುದು: ಸಚಿವ ಎನ್ ಚೆಲುವರಾಯಸ್ವಾಮಿ
ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಕೆ. ವಿ. ಶಿವಕುಮಾರ್ ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಕ್ಷರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಸಿ. ಎಸ್. ಚಂದ್ರಭೂಪಾಲ್, ಶಿವಮೊಗ್ಗ ಜಿಲ್ಲಾ ವಾರ್ತಾಧಿಕಾರಿಗಳಾದ ಆರ್. ಮಾರುತಿ, ಭಂಡಿಗಡಿ ನಂಜುಂಡಪ್ಪ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಹುಮಾಯೂನ್ ಹರ್ಲಾಪುರ ಮತ್ತು ಸಂಗಡಿಗರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರಾದ ಸಂಘದ ವೈದ್ಯನಾಥ್, ಸೋಮನಾಥ್, ಅರುಣ್ ಉಪಸ್ಥಿತರಿದ್ದರು.