ಕೇಂದ್ರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್: ಸಚಿವ ಡಾ. ಶರಣಪ್ರಕಾಶ ಪಾಟೀಲ್

Date:

Advertisements

ಕೇಂದ್ರ ಸರ್ಕಾರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಎಸ್‌ಟಿ ಮಂಡಳಿ ಮುಖ್ಯಸ್ಥರು ಹಣಕಾಸು ಸಚಿವರು. ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಅನುಷ್ಠಾನ ಮಾಡಲಾಗುತ್ತದೆ. ಜಿಎಸ್‌ಟಿ ಎಲ್ಲವನ್ನು ಕೇಂದ್ರ ಸರಕಾರ ಸಂಗ್ರಹ ಮಾಡುತ್ತದೆ, ಬಳಿಕ ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ನಾವು ಹೇಗೆ ನೊಟೀಸ್ ಕೊಡಲು ಸಾಧ್ಯ? ಎಲ್ಲ ನಿರ್ಧಾರವನ್ನು ಕೇಂದ್ರ ಸರಕಾರವೇ ಮಾಡಿದೆ ಎಂದು ಅವರು ವಿವರಿಸಿದರು.

ಜಗದೀಪ್ ಧನಕರ್ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ

Advertisements

ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್ ಧನಕರ್ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಆರೋಪಿಸಿದರು.

ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಲ್ಲಿ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ. ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡುತ್ತಿಲ್ಲ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಡಾ.ಪಾಟೀಲ್ ದೂರಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಬಿಜೆಪಿಯಲ್ಲಿ ಪ್ರಜಾಪ್ರಭುತ್ವ, ನೀತಿ-ನಿಯಮಗಳು ಇಲ್ಲ. ಕೇಂದ್ರ ಸರ್ಕಾರ ಕೂಡ ಸಂವಿಧಾನ ಪಾಲನೆ ಮಾಡುತ್ತಿಲ್ಲ. ಸರ್ಕಾರವನ್ನು ಮುನ್ನಡೆಸುತ್ತಿರುವವರು ಇದುವರೆಗೂ ಒಂದಾದರೂ ಸುದ್ದಿಗೋಷ್ಠಿ ಮಾಡಿದ್ದಾರಾ? ಏಕಪಕ್ಷೀಯ ನಿರ್ಧಾರಗಳೇ ಹೆಚ್ಚಾಗಿ ತೆಗೆದುಕೊಳ್ಳಲಾಗುತ್ತದೆ. ಇಂಥ ಅಪಸವ್ಯಗಳಿಂದಲೇ ಬಿಜೆಪಿಯಲ್ಲಿ ಅನಾರೋಗ್ಯ ಪರಿಸ್ಥಿತಿ ಇದೆ ಎಂದು ಸಚಿವರು ಟೀಕಿಸಿದರು.

ಗ್ಯಾರಂಟಿಗಳಿಂದ ಹೆಚ್ಚಾದ ತಲಾ ಆದಾಯ

ನಮ್ಮ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚಾಗಿದೆ. ನಾವೀಗ ದೇಶಕ್ಕೆ ನಂಬರ್ ಒನ್ ಸ್ಥಾನದಲ್ಲಿದ್ದೇವೆ ಎಂದು ಸಚಿವರು ತಿಳಿಸಿದರು.

50 ಸಾವಿರ ಕೋಟಿ ರೂ. ನೇರವಾಗಿ ಜನರಿಗೆ ತಲುಪುತ್ತಿದೆ. ಕರ್ನಾಟಕದಲ್ಲಿ ಜನಸ್ನೇಹಿ ಸರಕಾರವಿದೆ. ಜನೋಪಯೋಗಿ ಆರ್ಥಿಕ ನೀತಿಗಳಿಂದ ಸುಧಾರಣೆಯಾಗುತ್ತಿದೆ. ನಮ್ಮ ಕಾಂಗ್ರೆಸ್ ಅಧಿಕಾರದಲ್ಲಿ ಭೂ ಸುಧಾರಣಾ ಕಾಯಿದೆ ಸೇರಿದಂತೆ ಒಳ್ಳೊಳ್ಳೆ ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಇದು ತಲಾದಾಯ ಹೆಚ್ಚಳಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರಣವಾಗಿದೆ ಎಂದು ಡಾ.ಪಾಟೀಲ್ ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X