ಕಾಲೇಜಿನ ಹಾಸ್ಟೆಲ್‌ನಲ್ಲಿ ನೀಡುವ ಊಟದಲ್ಲಿ ಹುಳಗಳು ಕಂಡು ಬಂದಿವೆ. ಅಡುಗೆಗೆ ತಾಜಾ ತರಕಾರಿಗಳನ್ನು ಬಳಸದೇ, ಹುಳು ಬಿದ್ದಿರುವ ತರಕಾರಿ ಬಳಿಸಿ ಅಡುಗೆ ಮಾಡಲಾಗುತ್ತಿದೆ. ಹಾಸ್ಟೆಲ್ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಒತ್ತಾಯಿಸಿದೆ.
ಚಿತ್ರದುರ್ಗದ ಉಪನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಂಘಟನೆತಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. “ಹಾಸ್ಟೆಲ್‌ನಲ್ಲಿ ನೀಡುವ ಊಟದಲ್ಲಿ ಹುಳಗಳು ಸಿಗುತ್ತಿವೆ. ಅಲ್ಲದೆ, ಅನೇಕ ಸಮಸ್ಯೆಗಳಿವೆ. ಸಮಸ್ಯೆಗಳನ್ನು ಪರಿಹರಿಸುವಂತೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ” ಎಂದು ಕಿಡಿಕಾರಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಬಂದ ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ. ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.