ಚಿಕ್ಕಮಗಳೂರು l ಅನುದಾನದ ಹಣ ದುರುಪಯೋಗ: ಗ್ರಾ ಪಂ ಉಪಾಧ್ಯಕ್ಷೆ ನಂದಿನಿ ಸಂತೋಷ್ ಕರ್ತವ್ಯದಿಂದ ವಜಾ

Date:

Advertisements

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾಸನಬದ್ಧ ಅನುದಾನ ಮತ್ತು 15ನೇ ಹಣಕಾಸು ಹಾಗೂ ವರ್ಗ 1ರ ಅನುದಾನ ದುರುಪಯೋಗ ಮಾಡಿದ ಹಿನ್ನೆಲೆಯಲ್ಲಿ ಶಾನುವಳ್ಳಿ ಗ್ರಾ ಪಂ ಉಪಾಧ್ಯಕ್ಷೆ ನಂದಿನಿ ಸಂತೋಷ್ ಕರ್ತವ್ಯದಿಂದ ವಜಾಗೊಳಿಸಲಾಗಿದೆ.

ಗ್ರಾ. ಪಂ  ಉಪಾಧ್ಯಕ್ಷೆ ನಂದಿನಿ ಸಂತೋಷ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ವಜಾಗೊಳಿಸಿ ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಿದ್ದಾರೆ.

Screenshot 2025 07 23 16 59 57 67 439a3fec0400f8974d35eed09a31f914

ಶಾನುವಳ್ಳಿ ಗ್ರಾಪಂನಲ್ಲಿ ನಂದಿನಿ ಸಂತೋಷ್ ಅಧ್ಯಕ್ಷರಾಗಿದ್ದ ವೇಳೆಯಲ್ಲಿ 19 ಕಾಮಗಾರಿಗಳಲ್ಲಿ ಪಂಚಾಯಿತಿ ಅನುದಾನದ ಹಣ ದುರುಪಯೋಗ ಮಾಡಿದ್ದಾರೆ. ಸಾಮಾನ್ಯ ಸಭೆಯ ಅನುಮೋದನೆ ಪಡೆಯದೆ ಹಣ ಪಾವತಿಸಿರುವುದು, ದಾಸ್ತಾನು ಹಾಗೂ ವಿತರಣೆ ವಹಿಯಲ್ಲಿ ಸಾಮಗ್ರಿಗಳನ್ನು ನಮೂದಿಸದಿರುವುದು ಹಾಗೂ ಬಳಕೆಯಾದ ಸ್ಥಳದ ಬಗ್ಗೆ ಬಿಲ್ ನಲ್ಲಿ ದೃಢೀಕರಿಸದಿರುವುದು. 15ನೇ ಹಣಕಾಸು ಯೋಜನೆಯಡಿ ಕೆಟಿಪಿಪಿ ನಿಯಮ ಉಲ್ಲಂಘಿಸಿ ಸಾಮಗ್ರಿ ಖರೀದಿ, ಪಾವತಿ ಮತ್ತು ಕಾಮಗಾರಿ ಅನುಷ್ಠಾನ ಪ್ರಕ್ರಿಯೆಯಲ್ಲಿ ಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಈ ಆದೇಶ ಹೊರಡಿಸಿದ್ದಾರೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬೀದಿ ನಾಯಿಗಳಿಂದ ಎಂಟು ಜನರ ಮೇಲೆ ದಾಳಿ

2023ರಲ್ಲಿ ನಂದಿನಿ ಸಂತೋಷ್ ಹಾಗೂ ಪಿಡಿಒ ಚಂದನ್ ವಿರುದ್ಧ ದೂರು ದಾಖಲಿಸಲಾಗಿತ್ತು. ಪಿಡಿಒ ಚಂದನ್ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಬೇರೆಡೆ ವರ್ಗಾಯಿಸಿದ್ದರು ಹಾಗೂ ಇಲಾಖಾ ತನಿಖೆಗೆ ಒಳಪಡಿಸಲಾಗಿತ್ತು ಎಂದು ದೂರುದಾರರದ ಶಾನುವಳ್ಳಿ ಗ್ರಾ ಪಂ ಸದಸ್ಯ ನವೀನ್ ಕರುವಾನೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X