ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಕಾಳಗಿ ತಾಲ್ಲೂಕಿನ ಭೂತಪೂರ್ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇಡಂ, ಚಿಂಚೋಳಿ, ಕಾಳಗಿ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯಾಗಿದ್ದು, ಸೇಡಂ ಮತ ಕ್ಷೇತ್ರದಲ್ಲಿ ಬರುವ ರುದನೂರ್, ಚಿಂತಪಳ್ಳಿ, ರೈಕೋಠ, ಗಡಿಕೇಶ್ವರ, ಮಂಗಲಗಿ ಸೇರಿದಂತೆ ಅನೇಕ ಹಳ್ಳಿಗಳಿಗೆ ತೆರಳಲು ಇದು ಏಕೈಕ ಮಾರ್ಗವಾಗಿದೆ. ಭಾರಿ ಮಳೆ ಸುರಿದ ಪರಿಣಾಮ ಸೇತುವೆ ಮೇಲಿಂದ ನೀರು ಹರಿಯುತ್ತಿದ್ದು, ಜನರು ಓಡಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸೇತುವೆ ಮೇಲೆ ನೀರಿನ ಪ್ರವಾಹ ಹೆಚ್ಚಳವಾದ ಹಿನ್ನೆಲೆ ರಸ್ತೆ ಸಂಪರ್ಕವೂ ಕಡಿತವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇದರಿಂದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ತೆರಳಲು ಪರದಾಡುವಂತಾಗಿದೆ.
ಇದನ್ನೂ ಓದಿ : ಬೀದರ್ | ಮನೆ ಮಹಡಿ ಮೇಲೆ ‘ಡ್ರ್ಯಾಗನ್ ಫ್ರೂಟ್’ ಬೆಳೆದ ಉಪನ್ಯಾಸಕ!