ದಾವಣಗೆರೆ | ಜೀವನದಲ್ಲಿ ಸಾಧನೆ ಮಾಡುವ ಛಲವಿದ್ದರೆ ಸಾಧನೆ ಕಠಿಣವೇನಲ್ಲ: ಸ್ವಾಭಿಮಾನಿ ಬಳಗದ ಜಿ. ಬಿ. ವಿನಯ್ ಕುಮಾರ್

Date:

Advertisements

“ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು. ನಿಮ್ಮದೇ ಆದ ಸೀಮಿತ ಚೌಕಟ್ಟಿನೊಳಗೆ ಇರದೇ ಹೊರಗೆ ಬಂದು ಸಾಧನೆ ಮಾಡಲೇಬೇಕೆಂಬ ಛಲ ಹೊಂದಿದರೆ ಯಾವುದೂ ಅಸಾಧ್ಯವಲ್ಲ” ಎಂದು ಸ್ವಾಭಿಮಾನಿ ಬಳಗ, ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ. ವಿನಯ್ ಕುಮಾರ್ ಅವರು ದಾವಣಗೆರೆ ಟ್ರಿನಿಟಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ದಾವಣಗೆರೆ ನಗರದ ಟ್ರಿನಿಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, “ತಂದೆ ತಾಯಿಗೆ ನೀವು ಉತ್ತಮ ಕೆಲಸಕ್ಕೆ ಹೋಗಬೇಕೆಂಬ ಕನಸು ಇರುತ್ತದೆ. ಆದ್ರೆ, ನೀವು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದೀರೋ ಆ ಕ್ಷೇತ್ರದಲ್ಲಿ ಮುನ್ನಡೆಯಲು ಬಿಡದಿದ್ದಾಗ ರೆಬಲ್ ಆಗುತ್ತೀರಾ. ಹಾಗಾಗಿ, ಈಗಿನಿಂದಲೇ ಮುಂದೆ ಏನು ಮಾಡಬೇಕೆಂಬ ದೃಢ ನಿರ್ಧಾರಕ್ಕೆ ಬನ್ನಿ. ಸಂಕಲ್ಪ ತೊಡಿ. ಸಾಧಿಸಿಯೇ ತೀರುತ್ತೇವೆಂಬ ಕಠಿಣ ನಿರ್ಧಾರ ತಳೆದರೆ ಸಾಧನೆ ಕಷ್ಟವಾಗದು” ಎಂದು ಅಭಿಪ್ರಾಯಪಟ್ಟರು.

1002373041
ಟ್ರಿನಿಟಿ ಕಾಲೇಜಿನ ಕಾರ್ಯಕ್ರಮದಲ್ಲಿ ಸ್ವಾಭಿಮಾನಿ ಬಳಗ, ಇನ್ ಸೈಟ್ ಸಂಸ್ಥಾಪಕ ಜಿಬಿ ವಿನಯ್ ಕುಮಾರ್

“ಇಂದು AI ನಂಥ ತಂತ್ರಜ್ಞಾನವೂ ಬಂದಿದೆ. ಇದಕ್ಕೆ ವಿದ್ಯಾರ್ಥಿ ಸಮೂಹ ಒಗ್ಗಿಗೊಳ್ಳಬೇಕು. ಎಲ್ಲವೂ ಮಾನವರಿಂದಲೇ ಆಗುತ್ತದೆ ಎಂಬುದು ಭವಿಷ್ಯದಲ್ಲಿ ಊಹಿಸಿಕೊಳ್ಳುವುದು ಕಷ್ಟ. ತಂತ್ರಜ್ಞಾನ ಬೆಳೆದಂತೆ ನಾವೂ ಆಲೋಚನಾ ಕ್ರಮದ ಜೊತೆಗೆ ಕಲಿಯಲೇಬೇಕಾದ ಅವಶ್ಯಕತೆ ಇದೆ. ಮನಸ್ಸಿದ್ದರೆ ಮಾರ್ಗ ಎಂಬಂತೆ ಕಷ್ಟಪಟ್ಟು ದುಡಿದರೆ, ಹೆಚ್ಚು ಹೆಚ್ಚು ಪುಸ್ತಕ ಓದಿದರೆ, ಜ್ಞಾನ, ಆಕರ್ಷಕ ವ್ಯಕ್ತಿತ್ವ, ಗುಣಗಳನ್ನು ಬೆಳೆಸಿಕೊಂಡರೆ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ. ವಿದ್ಯಾರ್ಥಿಗಳು ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

“ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಿ. ಕನ್ನಡ ಜೊತೆಗೆ ಇಂಗ್ಲೀಷ್ ನಲ್ಲೂ ಮಾತನಾಡಿ. ಭಾಷಾ ಜ್ಞಾನ ವಿದ್ಯಾರ್ಥಿಗಳಿಗೆ ಅತ್ಯವಶ್ಯಕ. ಪಠ್ಯಪುಸ್ತಕದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಫ್ಯಾಷನ್, ಕಲೆ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಿ. ಯಾವುದೇ ಹಿಂಜರಿಕೆಯಿಲ್ಲದೇ ನಿಮಗೆ ಇರುವ ಆಸಕ್ತಿಯನ್ನು ತೋರ್ಪಡಿಸಿ” ಎಂದು ಹೇಳಿದರು.

1002371305

“ಇಂದು ಸರ್ಕಾರಿ ಕೆಲಸಗಳಲ್ಲಿ ಕೆಳಹಂತದ ನೌಕರರು ಮೇಲಿನ ಅಧಿಕಾರಿಗಳಿಗಿಂತ ಬುದ್ದಿವಂತರಾಗಿದ್ದರೆ ಸ್ಯಾಡಿಸಂ ಇರುತ್ತದೆ. ಹಾಗಾಗಿ, ಎಲ್ಲಾ ಕಡೆಗಳಲ್ಲಿಯೂ ನಮ್ಮ ಪ್ರತಿಭೆ, ಕೌಶಲ್ಯ, ಬುದ್ದಿವಂತಿಕೆ ತೋರ್ಪಡಿಸಿದರೆ ಸಹಿಸಿಕೊಳ್ಳುವುದಿಲ್ಲ. ಆದ್ರೆ, ಐಎಎಸ್, ಐಪಿಎಸ್, ಕೆಎಎಸ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಿ ಯಶಸ್ವಿಯಾಗಬೇಕು. ಇದಕ್ಕಾಗಿ ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಮಾಡಬೇಕು” ಎಂದು ಕಿವಿಮಾತು ಹೇಳಿದರು.

ಪಕ್ಷೇತರ ಅಭ್ಯರ್ಥಿಯಾಗಿ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದೆ. ನನಗೆ ಯಾವ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಸವಾಲಾಗಿ ತೆಗೆದುಕೊಂಡು ಕಣಕ್ಕಿಳಿದೆ. ಟಿಕೆಟ್ ಸಿಗದಿದ್ದರೂ ಇಡೀ ಕರ್ನಾಟಕ ರಾಜ್ಯದಲ್ಲಿ ಸ್ಪರ್ಧೆ ಮಾಡಿದ್ದ ಎಲ್ಲಾ ಪಕ್ಷೇತರ ಅಭ್ಯರ್ಥಿಗಳಿಗಿಂತ ಹೆಚ್ಚು ಮತ ಪಡೆದ ಪಕ್ಷೇತರ ಅಭ್ಯರ್ಥಿಯಾದೆ. ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಜನರ ನಂಬಿಕೆ ಉಳಿಸಿಕೊಂಡೆ. ಲೋಕಸಭೆ ಚುನಾವಣೆ ಬಳಿಕ ಬೀದರ್, ಚಾಮರಾಜನಗರ, ಮೈಸೂರು ಸೇರಿದಂತೆ ಎಲ್ಲೆಡೆ ಕಾರ್ಯಕ್ರಮಗಳಿಗೆ ಹೋಗುತ್ತಿದ್ದೇನೆ. ಸೋಲಿಸಿದರೂ ಸುಮ್ಮನೆ ಕುಳಿತಿಲ್ಲ. ರಾಜ್ಯಾದ್ಯಂತ ಓಡಾಡುತ್ತಿದ್ದೇನೆ” ಎಂದು ಜಿ. ಬಿ. ವಿನಯ್ ಕುಮಾರ್ ಹೇಳಿದರು. 

ನೀವು ಕನಸು ಕಾಣದಿದ್ದರೆ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ಸಾಧನೆ ಮಾಡದಿದ್ದರೆ ದೇಶಕ್ಕೆ, ರಾಜ್ಯಕ್ಕೆ, ಜಿಲ್ಲೆಗೆ, ಊರಿಗೆ, ಮನೆಗೂ ಭಾರ ಆಗುತ್ತೀರಾ. ಇನ್ ಸೈಟ್ಸ್ ಸಂಸ್ಥೆಯಲ್ಲಿ ಓದಿದವರು ಅತ್ಯುನ್ನತ ಹುದ್ದೆಯಲ್ಲಿದ್ದಾರೆ. ಡಿಸಿ, ಎಸ್ಪಿ, ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದಾರೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯೂರಿಯಾ ರಸಗೊಬ್ಬರ ಅಭಾವ; ರೈತರ ಬೆಳೆಗಳಿಗೆ ಅಗತ್ಯ ಗೊಬ್ಬರ ಒದಗಿಸಲು ರೈತ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ಕಾಲೇಜ್ ನ ಆಡಳಿತ ಮಂಡಳಿ ವತಿಯಿಂದ ಜಿ. ಬಿ. ವಿನಯ್ ಕುಮಾರ್ ಅವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶ್ರೀ ಗೌತಮ್ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ವಿಜಯ್, ಕಾರ್ಯದರ್ಶಿಗಳಾದ ವರ್ಷ ವಿ. ಜೈನ್, ನಿರ್ದೇಶಕರಾದ ಮೋಕ್ಷ ವಿ. ಚವ್ಹಾಣ್, ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಕೆ.ಎಂ ಹಾಗೂ ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X