ಕಳೆದ ಹಲವು ದಿನಗಳಿಂದ ಭಾರೀ ಗಾಳಿ ಮಳೆಯಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಮೂರೂ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ಜು.24 ರಂದು ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಪುತ್ತೂರು | ಬಸ್‌ನಲ್ಲಿ ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ; ಓರ್ವನ ಬಂಧನ
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುರಿಂದ ಜುಲೈ 24 ರಿಂದ ಜುಲೈ 26ರ ಬೆಳಗ್ಗೆ ವರೆಗೂ ರೆಡ್ ಅಲರ್ಟ್ ಘೋಷಿಸಿದೆ. ಬಳಿಕ ಜು.30 ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
