2022-23ನೇ ಸಾಲಿನಲ್ಲಿ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬೀದರ್ ನಗರದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ರ‍್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ.
ಪೂಜಾ ಶಿವಕುಮಾರ ಎಂ.ಕಾಂ ವಿಭಾಗದಲ್ಲಿ 3ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ರೋಹಿಣಿ ಶಶಿಕಾಂತ ಎಂ.ಎಸ್ಸಿ
ವಿಭಾಗದಲ್ಲಿ ವಿಶ್ವವಿದ್ಯಾಲಯಕ್ಕೆ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಜೊತೆಗೆ ಸ್ಟೆಲ್ಲಾ ರಾಣಿ ಎಂ.ಎಸ್ಸಿ ಗಣಿತ
ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.
ಅತ್ಯುತ್ತಮ ಅಂಕ ಪಡೆದುಕೊಂಡು ಪ್ರಥಮ ದ್ವಿತೀಯ ಮತ್ತು ತೃತೀಯ ರ‍್ಯಾಂಕ್‌ನಲ್ಲಿ ಪಾಸಾಗಿದ್ದಕ್ಕೆ ಕರ್ನಾಟಕ ರಾಷ್ಟ್ರೀಯ
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಿ.ಜಿ.ಶೆಟಕಾರ, ಕಾರ್ಯದರ್ಶಿ ಸತೀಶ ಪಾಟೀಲ, ಜಂಟಿ
ಕಾರ್ಯದರ್ಶಿ ಶಿವಾನಂದ ಗಾದಗೆ, ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಹಂಗರಗಿ, ಉಪ ಪ್ರಾಚಾರ್ಯ ಸೋಮನಾಥ
ಬಿರಾದಾರ ಹಾಗೂ ಪಿಜಿ ಸಂಯೋಜಕ ಡಾ.ಶಶಿಧರ ಪಾಟೀಲ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಹರ್ಷ ವ್ಯಕ್ತಪಡಿಸಿ
ಅಭಿನಂದಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಮನೆ ಮಹಡಿ ಮೇಲೆ ‘ಡ್ರ್ಯಾಗನ್ ಫ್ರೂಟ್’ ಬೆಳೆದ ಉಪನ್ಯಾಸಕ!