ಸಚಿವ ಕೆ ಜೆ ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ

Date:

Advertisements

‘ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ ಸಂಪೂರ್ಣ ಕಾನೂನು ಬಾಹಿರವಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ ಜೆ ಜಾರ್ಜ್‌ ವಿರುದ್ಧ ಪಿಸಿಆರ್ ದಾಖಲಿಸಿಕೊಳ್ಳಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಈ ಕುರಿತಂತೆ ಬುಧವಾರ ಆದೇಶಿಸಿದ್ದಾರೆ.

‘ಆರೋಪಿಗಳ ವಿರುದ್ಧದ ದೂರಿನ ಕುರಿತಾದ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ.

ದೂರಿನಲ್ಲಿ ಸಚಿವ ಕೆ ಜೆ ಜಾರ್ಜ್‌, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್‌ ಜೆ ರಮೇಶ್‌ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಇದನ್ನು ಓದಿದ್ದೀರಾ?: ನಾಸೀರುದ್ದೀನ್ ಷಾ @ 75 | ಅನಿಸಿದ್ದನ್ನು ಆಡುವ ಘಾಟಿ ಮುದುಕ

ಬಿಜೆಪಿಯ ಶಾಸಕ ಡಾ. ಸಿ ಎನ್‌ ಅಶ್ವತ್ಥ ನಾರಾಯಣ, ಶಾಸಕರಾದ ಎಸ್ ಆರ್ ವಿಶ್ವನಾಥ್ ಹಾಗೂ ಧೀರಜ್ ಮುನಿರಾಜು ಈ ಖಾಸಗಿ ದೂರು ಸಲ್ಲಿಸಿದ್ದಾರೆ. ದೂರುದಾರರ ಪರ ಪದಾಂಕಿತ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದ್ದಾರೆ.

ದೂರಿನಲ್ಲಿ ಏನಿದೆ?

‘ಸ್ಮಾರ್ಟ್‌ ಮೀಟರ್‌ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್ 26ರಂದು ಟೆಂಡರ್‌ ಕರೆಯಲಾಗಿತ್ತು. ಬಿಡ್‌ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಎಂಬ ಶೆಲ್‌ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಈ ಟೆಂಡರ್‌ ಅನ್ನು ರಾಜ್ಯದಲ್ಲಿ ವಿವಿಧ ಭಾಗಗಳ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಪ್ರತ್ಯೇಕ ಟೆಂಡರ್‌ ಕರೆಯದೆ ಬೆಸ್ಕಾಂ ಕಂಪನಿಯೊಂದಕ್ಕೇ ನೇರವಾಗಿ ನೀಡಲಾಗಿದೆ. ಈ ಕಾನೂನು ಬಾಹಿರವಾದ ಒಟ್ಟು ಪ್ರಕ್ರಿಯೆ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಅಧಿನಿಯಮ-2000 ಹಾಗೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‌ಸಿ) ನಿಯಮಗಳಿಗೆ ವಿರುದ್ಧವಾಗಿದೆ’ ಎಂದು ದೂರುದಾರರು ಆರೋಪಿಸಿದ್ದಾರೆ.

‘ದೂರಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 314, 316 ಮತ್ತು 61 ಹಾಗೂ ಭ್ರಷ್ಟಾಚಾರ ನಿಗ್ರಹ ತಿದ್ದುಪಡಿ ಕಾಯ್ದೆ–2018ರ ಕಲಂ 13(1) ಎ ಮತ್ತು 13(1) ಬಿ ಅನ್ವಯ ಆರೋಪಿಗಳ ವಿರದ್ಧ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಎಫ್‌ಐಆರ್ ದಾಖಲಿಸಲು ಆದೇಶಿಸಬೇಕು’ ಎಂದು ಫಿರ್ಯಾದುದಾರರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X