ಎಸ್‌ಐಆರ್‌ ವಿವಾದ | ಚುನಾವಣಾ ಬಹಿಷ್ಕಾರದ ಬಗ್ಗೆ ಮಾತನಾಡಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್

Date:

Advertisements

ರಾಷ್ಟ್ರೀಯ ಜನತಾ ದಳದ ಸಾಂಪ್ರದಾಯಿಕ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ತೆಗೆದು ಹಾಕಲಾಗುತ್ತಿದೆ ಎಂದು ಬಿಹಾರದ ಪ್ರತಿಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತ ಪರಿಷ್ಕರಣೆ ಬಗ್ಗೆ ಕಿಡಿಕಾರಿರುವ ಅವರು, ಚುನಾವಣಾ ಆಯೋಗವು ಉದ್ದೇಶಪೂರ್ವಕವಾಗಿಯೇ ಪ್ರತಿಪಕ್ಷವನ್ನು, ವಿಶೇಷವಾಗಿ ಆರ್‌ಜೆಡಿಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವಿಶೇಷ ಸಮಗ್ರ ಮತ ಪರಿಷ್ಕರಣೆ ಎನ್ನುವುದು ಒಂದು ಪಿತೂರಿ. ಸಾಂಪ್ರದಾಯಿಕ ರಾಷ್ಟ್ರೀಯ ಜನತಾ ದಳದ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಹೀಗೆ ಮಾಡುವ ಮೂಲಕ ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಪಕ್ಷದ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂಬ ಅನುಮಾನ ಮೂಡಿದೆ. ಈ ಬಗ್ಗೆ ಅಧಿವೇಶನದಲ್ಲಿಯೂ ಚರ್ಚಿಸಲಾಗಿದೆ. ನಮ್ಮ ಮತದಾರರನ್ನು ಗುರಿಯಾಗಿಸಿಕೊಂಡು ಆಯೋಗವು ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದ್ದು, ಇದನ್ನೆಲ್ಲ ನೋಡಿದರೆ ಚುನಾವಣೆ ನಡೆಸುವುದೇ ಅರ್ಥಹೀನ ಎಂದು ಅನ್ನಿಸುತ್ತದೆ ಎಂದು ತೇಜಸ್ವಿ ಯಾದವ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ಚುನಾವಣೆಗಳನ್ನು ಬಹಿಷ್ಕರಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಬಹಿಷ್ಕಾರ ಒಂದು ಆಯ್ಕೆ. ಆದರೆ, ಈ ಬಗ್ಗೆ ಮೈತ್ರಿಕೂಟದ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಕೊಳ್ಳಲಾಗುತ್ತದೆ. ಅಲ್ಲದೇ ಈ ಕುರಿತು ಸಾರ್ವಜನಿಕವಾಗಿಯೂ ಪ್ರಕಟಿಸಲಾಗುವುದು. ಇದೇ ಪರಿಸ್ಥಿತಿ ಮುಂದುವರಿದರೆ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ ತೇಜಸ್ವಿ ಯಾದವ್‌, ಯಾರಿಗೆ ಎಷ್ಟು ಸ್ಥಾನಗಳು ಸಿಗುತ್ತವೆ ಎಂಬುದರ ಕುರಿತು ಚುನಾವಣೆಗೂ ಮುನ್ನ ಎಲ್ಲವೂ ಈಗಲೇ ಸಿದ್ಧವಾಗಿದ್ದರೆ, ಚುನಾವಣೆ ನಡೆಸುವ ಅಗತ್ಯವೇನು ಎಂದು ಪ್ರಶ್ನಿಸಿದರು.

ಚುನಾವಣಾ ಆಯೋಗ ಇತ್ತೀಚಿಗೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅದರಲ್ಲಿ 52-55 ಲಕ್ಷ ಮತದಾರರು (ಅವರ ವಿಳಾಸದಲ್ಲಿ) ಕಂಡುಬಂದಿಲ್ಲ ಎಂದು ಹೇಳಿದೆ. ಇದನ್ನು ಗಮನಿಸಿದರೆ ಈ ಮತದಾರರ ಹೆಸರುಗಳ ಪರಿಷ್ಕರಣಾ ಪ್ರಕ್ರಿಯೆ ಕೇವಲ ಔಪಚಾರಿಕ ಅಂತ ಅನ್ನಿಸುತ್ತಿದೆ. ಅಲ್ಲದೇ ಇಲ್ಲಿ ಯಾವುದೇ ಪಾರದರ್ಶಕತೆ ಉಳಿದಿಲ್ಲ ಎಂಬ ಅನುಮಾನ ಕೂಡ ಕಾಡುತ್ತಿದೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರುಗಳು ಅಳಿಸಿಹೋದದ್ದೇ ಆದಲ್ಲಿ ತಮ್ಮ ಪಡಿತರ ಮತ್ತು ಪಿಂಚಣಿ ನಿಲ್ಲಬಹುದು ಎಂಬ ಚಿಂತೆಯಲ್ಲಿದ್ದಾರೆ. ಮೊದಲು ಮತದಾರರು ಸರ್ಕಾರಗಳನ್ನು ಆಯ್ಕೆ ಮಾಡುತ್ತಿದ್ದರು. ಆದರೆ, ಈಗ ಸರ್ಕಾರ ಮತದಾರರನ್ನು ಆಯ್ಕೆ ಮಾಡುತ್ತಿದೆ. ಚುನಾವಣಾ ಆಯೋಗದ ಮೂಲಕ ಇದನ್ನೆಲ್ಲ ಹೀಗೆ ಮಾಡಲಾಗುತ್ತಿದೆ ಎಂದು ತೇಜಸ್ವಿ ಯಾದವ್‌ ಗಂಭೀರ ಆರೋಪ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

Download Eedina App Android / iOS

X