ಭದ್ರಾವತಿ | ಮೊಬೈಲ್‌ಗೆ 2 ಮೆಸೇಜ್ ಬಂತು : ಒಟಿಪಿ ಹೇಳದೇನೆ ಹೋಯ್ತು ₹5 ಲಕ್ಷ ಹಣ

Date:

Advertisements

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು ಬರೋಬ್ಬರಿ 5.70 ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ. ಮೊಬೈಲ್‌ಗೆ ಬಂದ ಕೇವಲ ಎರಡು ಮೆಸೇಜ್‌ಗಳ ಮೂಲಕ ಓಟಿಪಿ ಕೇಳದೆಯೇ ಹಣ ಪಡೆದಿದ್ದಾರೆ.

ಈ ಬಗ್ಗೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಭದ್ರಾವತಿಯ ಸಾದತ್ ಕಾಲೋನಿಯ ವ್ಯಕ್ತಿಯೊಬ್ಬರ ಫೋನ್​ಗೆ ಎರಡು ಟೆಕ್ಸ್ಟ್​ ಮೇಸೇಜ್​ ಬಂದಿದ್ದವು. ಅದು HDFC ಬ್ಯಾಂಕ್​ ನ ಮೆಸೇಜ್​ ಆಗಿದ್ದು ಅದನ್ನು ದೂರುದಾರರು ಓಪನ್​ ಮಾಡಿದಾಗ ಅವರಿಗೊಂದು ಶಾಕ್​ ಎದುರಾಗಿತ್ತು.

ಅದೇನೆಂದರೆ ಅವರ ಬ್ಯಾಂಕ್​ನಿಂದ 5 ,70,000 ರೂಪಾಯಿ ಹಣ ಡೆಬಿಟ್ ಆಗಿತ್ತು. ಆದರೆ ಯಾರಿಗೂ ಹಣ ಹಾಕದ ದೂರುದಾರರು ಗಾಬರಿಯಿಂದ ಬ್ಯಾಂಕ್​ನಲ್ಲಿ ಹೋಗಿ ವಿಚಾರಿಸಿದಾಗಲೂ ಸಹ ಬ್ಯಾಂಕ್​ ಸಿಬ್ಬಂದಿ ನಿಮ್ಮ ಖಾತೆಯಿಂದ ಹಣ ಕಟ್​ ಆಗಿದೆ ಎಂದು ಹೇಳಿದ್ದರು.

Advertisements

ಇದರಿಂದ ದೂರುದಾರರಿಗೆ ಯಾರೋ ತಮ್ಮ ವಯಕ್ತಿಕ ಖಾತೆಯನ್ನು ಹ್ಯಾಕ್​ ಮಾಡಿ ಮೊಬೈಲ್​ಗೆ ಒಟಿಪಿಯನ್ನೂ ಕಳುಹಿಸದೆ ಹಂತ ಹಂತವಾಗಿ ಹಣವನ್ನು ವರ್ಗಾಯಿಸಿಕೊಂಡಿರುವುದು ತಿಳಿದು ಬಂದಿದೆ. ಕೂಡಲೆ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X