‌ಕಲುಷಿತ ನೀರು ಸೇವನೆ | ಕವಾಡಿಗರಹಟ್ಟಿಗೆ ದಿನೇಶ್‌ ಗುಂಡೂರಾವ್ ಭೇಟಿ, ಮೃತ ಕುಟುಂಬಗಳಿಗೆ ಸಾಂತ್ವನ

Date:

Advertisements
  • ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ
  • ಮೃತರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಸಚಿವರು

ಚಿತ್ರದುರ್ಗ ನಗರದ 17ನೇ ವಾರ್ಡ್ ವ್ಯಾಪ್ತಿಯ ಕವಾಡಿಗರಹಟ್ಟಿಯ ಎಸ್‌ಸಿ ಕಾಲೋನಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ ಆ ಇಡೀ ಪ್ರದೇಶವನ್ನೇ ತಲ್ಲಣಗೊಳಿಸಿದೆ. ಅಸ್ವಸ್ಥರಾದವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬರುವವರೆಗೂ ಏನನ್ನೂ ಹೇಳಲಾಗದ ಸ್ಥಿತಿ ನಿರ್ಮಾಣವಾಗಿದೆ.

ಶುಕ್ರವಾರ ಒಂದೇ ದಿನ ಮೂವರು ಮೃತಪಟ್ಟಿದ್ದನ್ನು ಕಂಡು ಸ್ಥಳೀಯರು ದಿಕ್ಕೇ ತೋಚದಂತಾಗಿದ್ದಾರೆ. ಈವರೆಗೂ ಐದು ಸಾವುಗಳಾಗಿದ್ದು, ಸಾವಿನ ಸರಣಿಯಿಂದ ಕವಾಡಿಗರಹಟ್ಟಿ ಸ್ಮಶಾನ ಮೌನಕ್ಕೆ ಜಾರಿದೆ.

ಈಗಾಗಲೇ ಕವಾಡಿಗರ ಹಟ್ಟಿ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Advertisements

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಶನಿವಾರ ಕವಾಡಿಗರಹಟ್ಟಿಗೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೇ ಮೃತರ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಣೆ ಮಾಡಿದರು.

ಅಸ್ವಸ್ಥರ ಸಂಖ್ಯೆ 177ಕ್ಕೆ ಏರಿಕೆ

19 ಜನರಲ್ಲಿ ವಾಂತಿ- ಭೇದಿ ಕಾಣಿಸಿಕೊಂಡಿದ್ದು, ಅಸ್ವಸ್ಥರ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಮೊದಲ ಮೂರು ಸಾವು ಸಂಭವಿಸಿದಾಗ ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದ ಹಟ್ಟಿಯಲ್ಲಿ ಈಗ ಸದ್ದೇ ಇಲ್ಲದಂತಾಗಿದೆ.

ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ 3,675 ಜನರು ಇದ್ದಾರೆ. ಇದರಲ್ಲಿ 1,128 ಜನರು ಇರುವ ಮೂರು ಬೀದಿಗಳಿಗೆ ಮಾತ್ರ ಕಲುಷಿತ ನೀರು ಪೂರೈಕೆಯಾಗಿದೆ. ಪರಿಶಿಷ್ಟ ಜಾತಿಯ ಜನರೇ ಹೆಚ್ಚಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X