ಮಂಡ್ಯ | ಯುವತಿಯನ್ನು ರೇಗಿಸಿದ ಪುಂಡ; ಪ್ರಶ್ನಿಸಿದ ಅಂಗಡಿ ಮಾಲೀಕರ ಮೇಲೆ ಹಲ್ಲೆ, ಅಂಗಡಿ ಧ್ವಂಸ

Date:

Advertisements

ಯುವತಿಯೊಬ್ಬಳನ್ನು ಸಾರ್ವಜನಿಕವಾಗಿ ಚುಡಾಯಿಸಿದ್ದನ್ನು ಪ್ರಶ್ನಿಸಿದ ಹಿರಿಯರೊಬ್ಬರ ಮೇಲೆ ಪುಂಡರು ಹಲ್ಲೆ ಮಾಡಿದ್ದು, ಅವರ ಅಂಗಡಿಯನ್ನೇ ನಾಶ ಮಾಡಿ, ₹40,000 ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಬಸ್‌ ನಿಲ್ದಾಣದ ಬಳಿ ಇರುವ ಅಂಗಡಿಗೆ ಬಂದಿದ್ದ ಯುವತಿಯೊಬ್ಬಳನ್ನು ಅಲ್ಲಿದ್ದ ಪುಂಡರ ಗುಂಪು ಚುಡಾಯಿಸಿದೆ. ಹುಡುಗಿ ಅಸಹಾಯಕವಾಗಿ ಅಂಗಡಿ ಮಾಲೀಕರತ್ತ ನೋಡಿದ್ದಾಳೆ. ಬಳಿಕ ಅಂಗಡಿ ಮಾಲೀಕರು ಯುವಕರನ್ನು ಪ್ರಶ್ನೆ ಮಾಡಿದ್ದಕ್ಕೆ‌ ಅವರು ಹಿರಿಯ ಜೀವದ ಮೇಲೆ ಹಲ್ಲೆ ಮಾಡಿದ್ದೂ ಅಲ್ಲದೆ ಅಂಗಡಿಯನ್ನೇ ಪುಡಿ ಪುಡಿ ಮಾಡಿ ಕ್ರೌರ್ಯ ಮೆರೆದಿದ್ದಾರೆ.

ಅಂಗಡಿ ಮಾಲೀಕ ಚಂದ್ರಶೇಖರ್ ಅವರು ಹಲ್ಲೆಗೆ ಒಳಗಾದವರು. ಅವರ ಅಂಗಡಿಗೆ ಯುವತಿಯೊಬ್ಬಳು ಆಗಮಿಸಿ ಸಾಮಗ್ರಿ ಖರೀದಿಸುತ್ತಿದ್ದಾಗ ಹಿರೇಮರಳಿ ಗ್ರಾಮದ ರಕ್ಷಿತ್ ಎಂಬಾತ ಯುವತಿಯನ್ನು ರೇಗಿಸಿದ್ದಾರೆ. ಈ ವೇಳೆ ಚಂದ್ರಶೇಖರ್‌ ಅವರು ʻʻಈ ರೀತಿ ಹುಡುಗಿಯನ್ನು ರೇಗಿಸಬೇಡ. ಇಲ್ಲಿಂದ ಹೋಗುʼʼ ಎಂದು ಬುದ್ಧಿವಾದ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ನ್ಯಾ. ಉಂಡಿ ಮಂಜುಳಾ ಶಿವಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ; ಬಾಣಂತಿ ಬಿಡುವ ಗುಡಿಸಲು ನಾಶ

ಈ ವೇಳೆ ರಕ್ಷಿತ್‌ ಪೋನ್ ಮಾಡಿ ತನ್ನ ಕೆಲವು ಸ್ನೇಹಿತರನ್ನು ಕರೆಸಿಕೊಂಡಿದ್ದಾನೆ. ಅವರೆಲ್ಲ ಬಂದಾಗ ʻʻನನಗೇ ಬುದ್ದಿ ಹೇಳ್ತೀಯಾʼʼ ಎಂದು ಸ್ನೇಹಿತರ ಜೊತೆಗೆ ಸೇರಿ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಿದ್ದಾರೆ. ಜೊತೆಗೆ ಆರೋಪಿ ರಕ್ಷಿತ್‌ ಮತ್ತು ತಂಡ ಅಂಗಡಿಯಲ್ಲಿದ್ದ ಕಂಪ್ಯೂಟರ್ ಧ್ವಂಸಗೊಳಿಸಿ, ₹40,000 ದೋಚಿ ಪರಾರಿಯಾಗಿದೆ.

ಗಾಯಗೊಂಡಿರುವ ಚಂದ್ರಶೇಖರ್‌ ಅವರಿಗೆ ಪಾಂಡವಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಿತ್, ಬೋರಾಶೆಟ್ಟಿ, ವಿನಯ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಪಾಂಡವಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X