ಶಿವಮೊಗ್ಗ ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ನಗರದ ಸರ್ಕಾರಿ ನೌಕರರ ಭವನದ ಪಕ್ಕದ ಸೈನಿಕ ಉದ್ಯಾನವನದಲ್ಲಿ ಜುಲೈ ೨೬ ರ ಶನಿವಾರ ಬೆಳಿಗ್ಗೆ 9:15ಕ್ಕೆ ೨೬ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ|| ಸಿ.ಎ.ಹಿರೇಮಠ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.ರಾಷ್ಟ್ರೀಯ ವಿದ್ಯಾರ್ಥಿ ಸೈನಿಕ ದಳ (ಎನ್.ಸಿ.ಸಿ) ದಿಂದ ಆಕರ್ಷಕ ಗೌರವ ಸಮರ್ಪಿಸಲಿದ್ದಾರೆ.
ಜಿಲ್ಲೆಯ ಎಲ್ಲ ಮಾಜಿ ಸೈನಿಕರು ಹಾಗೂ ಕುಟುಂಬದವರು, ವಿದ್ಯಾರ್ಥಿ ಸಮುದಾಯ, ಹಾಗೂ ಸಾರ್ವಜನಿಕರು ಪಾಲ್ಗೊಂಡು ಹುತಾತ್ಮ ಯೋಧರಿಗೆ ಗೌರವ ನಮನವನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾ ಮಾಜಿ ಸೈನಿಕರ ಸಂಘ ಅಧ್ಯಕ್ಷ ಪಿ.ವಿ ಕೃಷ್ಣ ರೆಡ್ಡಿ ಕೋರಿದ್ದಾರೆ