ಚಿತ್ರದುರ್ಗ | ಮಗುವಿನ ವಿಶೇಷ ಗುಣ ಗುರುತಿಸುವ ಹೊಣೆ ಶಿಕ್ಷಕರದು; ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಡಾ.ಹೆಚ್.ಬಿ.ಪ್ರೀತಿ

Date:

Advertisements

“ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಗುಣಗಳು ಇರುತ್ತವೆ. ಅವುಗಳನ್ನು ಗುರುತಿಸುವ ಹೊಣೆ ಶಿಕ್ಷಕರದಾಗಿರುತ್ತದೆ” ಎಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಹನುಮಂತದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ‘ಮಕ್ಕಳ ಕಲಾ ಪ್ರತಿಭೆ’ ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಡಾ.ಹೆಚ್.ಬಿ.ಪ್ರೀತಿ ಅಭಿಮತ ವ್ಯಕ್ತಪಡಿಸಿದರು.

1002378839

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಹನುಮಂತ ದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಹೊಳಲ್ಕೆರೆ ತಾಲ್ಲೂಕು ಬಾಲಭವನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಆಧುನಿಕ ತಾಂತ್ರಿಕ ಯುಗದಲ್ಲಿ ತಾಂತ್ರಿಕ ಮಾಧ್ಯಮಗಳಿಗೆ ಮಕ್ಕಳು ಅವಲಂಬಿತರಾಗಬಾರದು. ಮಕ್ಕಳು ಬಾಲ್ಯದಲ್ಲೇ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬರಲು ಬಹಳ ಅನುಕೂಲವಾಗುತ್ತದೆ” ಎಂದು ತಿಳಿಹೇಳಿದರು.

ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ.ಶ್ರೀಕುಮಾರ್ ಮಾತನಾಡಿ, “ಮಕ್ಕಳು ಅಂಕಗಳಿಗೆ ಸೀಮಿತರಾಗಿ ಕೌಶಲ್ಯ ಮತ್ತು ಮೌಲ್ಯಗಳನ್ನು ಕಲಿಯುವಲ್ಲಿ ಹಿಂದೆ ಸರಿಯುತ್ತಿದ್ದಾರೆ. ಮಾನವೀಯ ಮೌಲ್ಯಗಳು ಮತ್ತು ಕೌಶಲ್ಯಗಳನ್ನು ಕಲಿಸಲು ರಾಜ್ಯ ಬಾಲಭವನವು ಈ ಯೋಜನೆಯ ಮೂಲಕ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಸನ್ಮಾನಿಸುವ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

Advertisements
1002378840

ರಾಜ್ಯ ಬಾಲಭವನ ಸೊಸೈಟಿಯ ಅಧ್ಯಕ್ಷರಾದ ಬಿ.ಆರ್.ನಾಯ್ಡು ಅವರು “ಮಕ್ಕಳ ಶ್ರೇಯೋಭಿವೃದ್ಧಿಗಾಗಿ ವಿವಿಧ ಕೌಶಲ್ಯಗಳನ್ನು ಗುರುತಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ ? ಮದ್ಯ ಕರ್ನಾಟಕ-ಕಾವ್ಯ ಸಂಭ್ರಮ; ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಕವಿಗಳು ಭಾಗಿ

ಕಾರ್ಯಕ್ರಮದಲ್ಲಿ ಭಾಷಣ, ಪ್ರಬಂಧ, ಗಾಯನ ಸ್ಪರ್ಧೆಯನ್ನು ಆಯೋಜಿಸಿ, ವಿಜೇತ ಮಕ್ಕಳಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಗೀತ ಶಿಕ್ಷಕರಾದ ಮಹಾರುದ್ರಯ್ಯ, ಶಿಕ್ಷಕರಾದ ತಿಮ್ಮೇಶ್, ಮೊಹಮದ್ ರಸೂಲ್, ರೇಖಾ ಬಾಯಿ, ಆಶಾರಾಣಿ, ಮನು, ರವಿ, ಕುಮಾರಿ, ಶ್ರೀಧರ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X