ಬೆಳಗಾವಿಯ ವಿಶ್ವೇಶ್ವರಯ್ಯಾ ತಾಂತ್ರೀಕ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ವರ್ಷದ ವಿದ್ಯಾರ್ಥಿನಿ ರಾಜ್ಯಕ್ಕೆ 39ನೇ ರ‍್ಯಾಂಕ್ ಪಡೆದು ಅತ್ಯುತ್ತಮ ಸಾಧನೆಗೈದು ಎಲ್ಲರ ಗಮನ ಸೆಳೆದಿದ್ದಾರೆ.
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಿಂಕಿ ಉತ್ತಮ ಮಂಡಲಅವರು ಬೆಳಗಾವಿಯ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ 39ನೇ ರ‍್ಯಾಂಕ್ ಪಡೆದಿದ್ದಾರೆ.
ವಿದ್ಯಾರ್ಥಿನಿ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ದಿಲೀಪಕುಮಾರ ಎಸ್.ತಾಳಂಪಳ್ಳಿ ಹಾಗೂ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು, ಬಿಇಟಿ ಟ್ರಸ್ಟ್ ನಿರ್ದೇಶಕ ಹಾಗೂ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಿಬ್ಭಂದ್ದಿ, ಮುಖ್ಯಸ್ಥರಾದ ಡಾ.ಸಂಜೀವಕುಮಾರ ಜಲ್ದೆ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು, ಕಾಲೇಜಿನ ಉಪಪ್ರಾಚಾರ್ಯ ಡಾ.ಅರುಣಕುಮಾರ ಎಲಾಲ, ಕುಲಸಚಿವ ಪ್ರೇಮಸಾಗರ ಪಾಟೀಲ, ಆಡಳಿತ ಕಚೇರಿ ಅಧೀಕ್ಷರು ವೃಷಿಕೇತ ಭೂಸಾರೆ, ಪಿಆರ್‌ಒ ಶಂಕರ ಆಗರಗಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಮನೆ ಮಹಡಿ ಮೇಲೆ ‘ಡ್ರ್ಯಾಗನ್ ಫ್ರೂಟ್’ ಬೆಳೆದ ಉಪನ್ಯಾಸಕ!