ಮಣಿಪುರ: ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ

Date:

Advertisements

ಹಿಂಸಾಚಾರದಿಂದ ಜರ್ಜರಿತವಾಗಿರುವ ಈಶಾನ್ಯ ರಾಜ್ಯ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನು ಸದನವು ಅಂಗೀಕರಿಸಿದೆ.

ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ವಿಸ್ತರಣೆಯಾಗಲಿದೆ. ಮಣಿಪುರಕ್ಕೆ ಸಂಬಂಧಿಸಿದಂತೆ ಸಂವಿಧಾನದ 356ನೇ ವಿಧಿ ಅನ್ವಯ 2025ರ ಫೆಬ್ರವರಿ 13ರಂದು ರಾಷ್ಟ್ರಪತಿಗಳು ನೀಡಿದ ಸುಗ್ರೀವಾಜ್ಞೆಯನ್ನು 2025ರ ಆಗಸ್ಟ್ 13 ರಿಂದ ಆರು ತಿಂಗಳ ಕಾಲ ಮುಂದುವರಿಸಲು ಸದನ ಒಪ್ಪಿಗೆ ನೀಡಬೇಕಿದೆ ಎಂದು ಸದನದಲ್ಲಿ ಮಂಡಿಸಲಾದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

2 ವರ್ಷಗಳ ಹಿಂದೆ ಶುರುವಾದ ಹಿಂಸಾಚಾರ

Advertisements

2023ರ ಹೈಕೋರ್ಟ್‌ ಆದೇಶದ ವಿರುದ್ಧವಾಗಿ ಬುಡಕಟ್ಟು ಸಮುದಾಯದ ಮೆರವಣಿಗೆಯೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಏರ್ಪಟ್ಟಿತು. ಇಲ್ಲಿಂದ ಸತತವಾಗಿ ಜನಾಂಗೀಯ ಹಿಂಸಾಚಾರ ಶುರುವಾಗಿದೆ. ಪರಿಸ್ಥಿತಿ ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ಇದಾದ ಕೆಲವೇ ದಿನಗಳಲ್ಲಿ ಅಂದ್ರೆ ಈ ವರ್ಷ ಫೆಬ್ರವರಿ 13ರಂದು 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು. ರಾಜ್ಯದಲ್ಲಿ 1951ರಿಂದ ಇಲ್ಲಿಯವರೆಗೆ 11ನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X