ಕಾಪುವಿನ ಮಲ್ಲಾರು ಫಕೀರನಕಟ್ಟೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ರಜಬ್ ಬ್ಯಾರಿ(47), ರಜಬ್ ಅಲಿ(40), ನಯಾಜ್(42) ಇವರ ಕುಟುಂಬಕ್ಗೆ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಜೂರು ಮಾಡಿದ್ದಕ್ಕೆ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾಂಗ್ರೆಸ್ ಅಧ್ಯಕ್ಷ ಶರ್ಫುದ್ದಿನ್ ಶೇಖ್ ಮುಖ್ಯಮಂತ್ರಿಗಳಿಗೆ, ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅವರು, ಪರಿಹಾರ ಮೊತ್ತ ಮಂಜೂರು ಮಾಡುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷವಾಗಿ ಮಾಜಿ ಸಚಿವರಾದ ವಿನಯಕುಮಾರ ಸೊರಕೆಯವರ ಶ್ರಮವನ್ನು ಸ್ಮರಿಸುತ್ತಾ, ಸೊರಕೆಯವರು ಸಂತ್ರಸ್ತ ಕುಟುಂಬಕ್ಕೆ ಪರಿಹಾರವನ್ನು ಮಂಜೂರು ಮಾಡುವಲ್ಲಿ ನಿರಂತರ ಕೆಲಸ ಮಾಡಿರುವುದು ಮಾತ್ರವಲ್ಲ ಕ್ಷೇತ್ರದಲ್ಲಿ ಯಾರೇ ತೊಂದರೆಗೀಡಾದರೂ ಅವರ ಕುಂದುಕೊರತೆಗಳಿಗೆ ಸ್ಪಂದಿಸುವ ಮಾನವೀಯ ಕಳಕಳಿಯು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು.
