ಸರ್ಕಾರಿ ಜಮೀನಿನಲ್ಲಿ ಅನುಮತಿ ಇಲ್ಲದೆ ಕೃಷಿಹೊಂಡ ಮಾಡಿಕೊಂಡಿರುವುದು ಅಧಿಕಾರಿಗಳಿಗೆ ಗೊತ್ತಿದ್ದರೂ ಗೊತ್ತಿಲ್ಲದಂತೆ ನಟಿಸುತ್ತಿದ್ದಾರೆ ಎಂದು ಚಿಂತಾಮಣಿ ತಾಲೂಕಿನ ದ್ವಾರಪಲ್ಲಿ ಗ್ರಾಮದ ಕೆಲ ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ದ್ವಾರಪಲ್ಲಿ ಗ್ರಾಮದ ಸರ್ವೆ ನಂ:13 ರಲ್ಲಿ 1-25 ಗುಂಟೆ ಜಮೀನಿನ ಪಕ್ಕದಲ್ಲಿ ಸರ್ಕಾರಿ ಜಮೀನು ಇದ್ದು ಅದೇ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಲಾಗಿದೆ ಎಂಬುದರ ಬಗ್ಗೆ ಸದರಿ ಗ್ರಾಮದ ನಾರಾಯಣಮ್ಮ ಬಿನ್ ಲೇಟ್ ಮುನಿಯಪ್ಪ ಎಂಬುವರು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ನೀಡಿರುವ ಪತ್ರದಲ್ಲಿ ಬಹಿರಂಗಪಡಿಸಿದ್ದಾರೆ.
ಸರ್ಕಾರಿ ಜಮೀನಿನಲ್ಲಿ ಕೃಷಿ ಹೊಂಡವನ್ನು ನಿರ್ಮಾಣ ಮಾಡಲು ಅನುಮತಿ ನೀಡಿದವರು ಯಾರು? ಸಂಬಂಧಪಟ್ಟ ಇಲಾಖೆಯಿಂದ ಕೃಷಿ ಹೊಂಡವನ್ನು ನಿರ್ಮಾಣ ಮಾಡಲು ಅನುದಾನ ಕೊಟ್ಟ ಅಧಿಕಾರಿಗಳು ಯಾರು? ಸೇರಿದಂತೆ ಹಲವು ಪ್ರಶ್ನೆಗಳು ಈಗ ಎದ್ದಿವೆ. ಈ ಎಲ್ಲಾ ಪ್ರಶ್ನೆಗಳಿಗೆ ಅಧಿಕಾರಿಗಳೇ ಉತ್ತರ ಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಚಿಂತಾಮಣಿ | ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಂದ ರಸ್ತೆತಡೆ ಪ್ರತಿಭಟನೆ