ನಕಲಿ ಬಿಲ್‌ಗೆ ಸಹಿ ಮಾಡಲು ಒತ್ತಡ: ಅಧಿಕಾರಿಗಳ ಹೆಸರು ಬರೆದಿಟ್ಟು ಸರ್ಕಾರಿ ಇಂಜಿನಿಯರ್ ಆತ್ಮಹತ್ಯೆ

Date:

Advertisements

ನಕಲಿ ಬಿಲ್‌ಗೆ ಸಹಿ ಹಾಕಿ, ಆ ಬಿಲ್‌ಅನ್ನು ಪಾಸ್‌ ಮಾಡಬೇಕೆಂದು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿರುವ ಸರ್ಕಾರಿ ಸಹಾಯಕ ಎಂಜಿನಿಯರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಅಸ್ಸಾಂನ ಬೊಂಗೈಗಾಂವ್‌ನಲ್ಲಿ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಸಹಾಯಕ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಜ್ಯೋತಿಷಾ ದಾಸ್ (30) ಅವರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಸಾವಿಗೂ ಮುನ್ನ ‘ಡೆತ್‌ನೋಟ್‌’ ಬರೆದಿಟ್ಟಿದ್ದು, ಅದರಲ್ಲಿ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಡೆತ್‌ನೋಟ್‌ನಲ್ಲಿ; “ಕಾಮಗಾರಿ ಅಪೂರ್ಣಗೊಂಡಿದ್ದರೂ, ಪೂರ್ಣಗೊಂಡಿದೆ ಎಂಬುದಾಗಿ ನಕಲಿ ಬಿಲ್‌ಗಳನ್ನು ಸಿದ್ದಪಡಿಲಾಗಿದ್ದು, ಆ ನಕಲಿ ಬಿಲ್‌ಗಳನ್ನು ಪಾಸ್‌ ಮಾಡಬೇಕೆಂದು ಇಬ್ಬರು ಹಿರಿಯ ಅಧಿಕಾರಿಗಳು ತೀವ್ರ ಒತ್ತಡ ಹೇರಿದ್ದಾರೆ. ಅವರ ಒತ್ತಡದಿಂದಾಗಿ ನನಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಒತ್ತಡ ಕಾರಣದಿಂದಾಗಿ ನಾನು ಈ ನಿರ್ಧಾರ ಮಾಡಿದ್ದೇನೆ” ಎಂದು ಜ್ಯೋತಿಷಾ ಬರೆದಿರುವುದಾಗಿ ತಿಳಿದುಬಂದಿದೆ.

ತಮಗೆ ಒತ್ತಡ ಹೇರಿದ ಇಬ್ಬರು ಅಧಿಕಾರಗಳ ಹೆಸರನ್ನೂ ಆಕೆ ಉಲ್ಲೇಖಿಸಿದ್ದಾರೆ. ಜ್ಯೋತಿಷಾ ಅವರ ಕುಟುಂಬವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಆರಂಭಿಸಿದ್ದಾರೆ.

ಯುವತಿ ಬರೆದಿಟ್ಟಿದ್ದ ಡೆತ್‌ನೋಟ್‌ ಆಧಾರದ ಮೇಲೆ ಬೊಂಗೈಗಾಂವ್‌ ಕಾರ್ಯನಿರ್ವಾಹಕ ಇಂಜಿನಿಯರ್ ದಿನೇಶ್ ಮೇಧಿ ಶರ್ಮಾ ಮತ್ತು ಉಪ-ವಿಭಾಗೀಯ ಅಧಿಕಾರಿ (ಎಸ್‌ಡಿಒ) ಅಮೀನುಲ್ ಇಸ್ಲಾಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X