ಕೊಡಗು | ಲಾರಿ, ಕಾರಿನ ನಡುವೆ ಭೀಕರ ಅಪಘಾತ; ನಾಲ್ವರ ಸಾವು

Date:

Advertisements

ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಕಾರಿನಲ್ಲಿದ್ದ ನಿಹಾದ್, ರಿಝ್ವಾನ್, ರಾಖಿಬ್ ಎಂಬವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತ ಓರ್ವ ಯುವಕನ ಗುರುತು ಇನ್ನಷ್ಟೇ ತಿಳಿದುಬರಬೇಕಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಉಪರಾಷ್ಟ್ರಪತಿ ಚುನಾವಣೆ; ಆತ್ಮಸಾಕ್ಷಿ ಮತಕ್ಕೆ ಗೆಲುವಾಗಲಿ

ಗೊಣಿಕೊಪ್ಪ ಮತ್ತು ಹುಣಸೂರಿನ ನಾಲ್ವರು ಯುವಕರು ದ.ಕ. ಜಿಲ್ಲೆಯ ಉಳ್ಳಾಲಕ್ಕೆ ಗುರುವಾರ ಕಾರಿನಲ್ಲಿ ತೆರಳಿದ್ದವರು ಅಲ್ಲಿಂದ ಇಂದು ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕಾರಿಗೆ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ

ಕೊಡಗು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮಾಹಿತಿ ಪಡೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

Download Eedina App Android / iOS

X