ಪಿಕಪ್ ಸಮೇತ ಭದ್ರ ನದಿಯಲ್ಲಿ ಮುಳುಗಿ ಸಾವನಪ್ಪಿದ್ದ, ಮಗನ ಸಾವನ್ನು ತಿಳಿದ ತಾಯಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆ ರವಿಕಲಾ(48 )ಎಂದು ಗುರುತಿಸಲಾಗಿದೆ. ಮೃತ ರವಿಕಲಾ ಪುತ್ರ ಶಮಂತ್ (23) ಪಿಕಪ್ ಜೀಪಿನಲ್ಲಿ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ್ದನು. ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಜೀಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದನು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ: ಪಿಕಪ್ ಭದ್ರ ನದಿಗೆ ಬಿದ್ದು ಯುವಕ ಸಾವು
ಗುರುವಾರ ಸಂಜೆ ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ, ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ಗುರುವಾರ ರಾತ್ರಿ ವೇಳೆ ಮನೆ ಪಕ್ಕದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.