ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸತತ ಎರಡನೇ ಬಾರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರ ಪೀಠ ವಜಾಗೊಳಿಸಿದೆ.
ಈ ಹಿಂದೆ ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈಗ ಮತ್ತೆ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಇದನ್ನು ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ಸಾಮಾಜಿಕ ಮಾಧ್ಯಮ ಸೇರಿದಂತೆ ಹಲವು ಕಡೆಗಳಲ್ಲಿ ಹಲವು ಮಹಿಳೆಯರ ಲೈಂಗಿಕ ದೌರ್ಜನ್ಯದ 2,900ಕ್ಕೂ ಅಧಿಕ ವಿಡಿಯೋಗಳು ಹರಿದಾಡಿದೆ. ಈ ಸಂಬಂಧ ಕಳೆದ ವರ್ಷ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಗಿದ್ದಾರೆ.
ಕಳೆದ ವರ್ಷ ಏಪ್ರಿಲ್‌ನಲ್ಲಿ ರೇವಣ್ಣ ಕುಟುಂಬದ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಮಹಿಳೆ ದೂರು ದಾಖಲಿಸಿದ್ದರು. ಪ್ರಜ್ವಲ್ ರೇವಣ್ಣ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಮತ್ತು ಅತ್ಯಾಚಾರದ ಬಗ್ಗೆ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಈ ಸಂಬಂಧ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ ಮತ್ತು ಖಾಸಗಿ ಚಿತ್ರಗಳ ಅನಧಿಕೃತ ಪ್ರಸರಣ ಸೇರಿದಂತೆ ವಿವಿಧ ಕ್ರಿಮಿನಲ್ ಪ್ರಕರಣಗಳಡಿ ದೂರು ದಾಖಲಾಗಿದೆ.
