ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು. ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್‌ರವರು ಘೋಷಿಸಿದರು.
ಈ ಬಾರಿಯ ಕೆಎಮ್‌ಎಫ್ ಚುನಾವಣೆಯಿಂದ ಮಾಜಿ ಅಧ್ಯಕ್ಷ ಭೀಮ ನಾಯ್ಕ ದೂರ ಉಳಿದರು. ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ ಹಿಟ್ನಾಳ್ 7 ಮತ್ತು ಭೀಮ ನಾಯ್ಕ 5 ನಿರ್ದೇಶಕರ ಬಲ ಹೊಂದಿದ್ದರು. 2 ದಿನಗಳ ಹಿಂದೆಯಷ್ಟೇ ಒಕ್ಕೂಟಕ್ಕೆ ಸರಕಾರ ಹಿಟ್ನಾಳ ಅವರನ್ನು ನಾಮನಿರ್ದೇಶನ ಮಾಡಿತ್ತು. ಇದರಿಂದ 8ರ ಸಂಖ್ಯಾಬಲ ಹೊಂದಿತ್ತು.
ಇದನ್ನೂ ಓದಿ: ಬಳ್ಳಾರಿ | ಬಾಲ್ಯ ವಿವಾಹ ಪ್ರಕರಣ : ಐವರ ಬಂಧನ
ಬಳ್ಳಾರಿಯ ಕೆಲವು ಶಾಸಕರು ಹಾಗೂ ಸಿಎಮ್ ಬೆಂಬಲವೂ ಇರುವುದರಿಂದ ಮಾಜಿ ಅಧ್ಯಕ್ಷ ಭೀಮನಾಯ್ಕ್‌ಗೆ ತೀವ್ರ ಹಿನ್ನೆಡೆಯಾಗಿದೆ.