ಇಬ್ಬರು ಅಪರಿಚಿತರು 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರ ಎಸಗಿ, ನಂತರ ಅಪಹರಿಸಿದ ಸ್ಥಳದಲ್ಲೇ ಬಿಟ್ಟು ಹೋಗಿರುವ ಘಟನೆ ಪಂಜಾಬ್‌ನ ಮೊಹಾಲಿಯ ಚಂಡೀಗಢ-ಅಂಬಾಲ ರಾಷ್ಟ್ರೀಯ ಹೆದ್ದಾರಿಯ ಬಳಿಯ ಜಿರಾಕ್‌ಪುರದಲ್ಲಿರುವ ವಿಐಪಿ ರಸ್ತೆಯಲ್ಲಿರುವ ಮೆಟ್ರೋ ಮಾಲ್ ಬಳಿ ಇತ್ತೀಚೆಗೆ ನಡೆದಿದೆ.
ಸಲೂನ್‌ಗೆ ಹೋಗಿ ಬಳಿಕ ಬಾಲಕಿ ಆಟೋರಿಕ್ಷಾಕ್ಕಾಗಿ ಕಾಯುತ್ತಿದ್ದಾಗ ಇಬ್ಬರು ಆರೋಪಿಗಳು ಆಕೆಯನ್ನು ಬಲವಂತವಾಗಿ ಕಾರಿನೊಳಗೆ ಎಳೆದು ಅಪಹರಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದುರುಳ ತಂದೆಗೆ 20 ವರ್ಷ ಜೈಲು ಶಿಕ್ಷೆ
ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ಮಾಡಿದ ದುರಳರು, ಚಂಡೀಗಢದ ಟ್ರಿಬ್ಯೂನ್ ಚೌಕ್ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಲೈಂಗಿಕ ದೌರ್ಜನ್ಯ, ಹಲ್ಲೆ ನಡೆಸುವಾಗ ಆರೋಪಿಗಳು ಬಾಲಕಿಯ ಸಹೋದರನ ಹೆಸರನ್ನು ಹೇಳುತ್ತಿದ್ದರು ಎಂದು ವರದಿಯಾಗಿದೆ.
ಇನ್ನು ಅತ್ಯಾಚಾರ ನಡೆಸಿದ ಬಳಿಕ ಬಾಲಕಿಯನ್ನು ಅಪಹರಿಸಿದ ಸ್ಥಳದಲ್ಲೇ ಆಕೆಯನ್ನು ದುರುಳರು ಎಸೆದು ಹೋಗಿದ್ದಾರೆ. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ್ದು, ಜಿರಾಕ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಗುರುತಿಸಲು ಮತ್ತು ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
