“ವೀರ ಮಡಿವಾಳ ಮಾಚಿದೇವ ಯುವ ಸೇನಾಪಡೆಯ ವತಿಯಿಂದ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ 2025, ಜುಲೈ 27ರ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಎಂಟನೇ ವರ್ಷದ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಅಂತರ್ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಮಡಿವಾಳ ಮಾಚಿದೇವ ಸೇನಾ ಪಡೆಯ ಕಾರ್ಯಾಧ್ಯಕ್ಷ ನಾಗತಿಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.

“ಹೊಸದುರ್ಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಆರ್.ಶಾಂತಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸೇನಾ ಪಡೆಯ ಅಧ್ಯಕ್ಷ ಮೀರಸಾಬಿಹಳ್ಳಿ ಶಿವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಾನಕಲ್ಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ರಾಜೇಶ್, ಎಸ್.ದತ್ತಿ ನಿಧಿ ಉದ್ಘಾಟನೆ ಮಾಡಲಿದ್ದು, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಪಾಲಕಿ ವಿಜಯಲಕ್ಷ್ಮಿ ವಿದ್ಯಾರ್ಥಿಗಳ ಹೊಣೆಗಾರಿಕೆ ಮತ್ತು ಜವಾಬ್ದಾರಿ ಕುರಿತು ಮಾತನಾಡಲಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಮದ್ಯ ಕರ್ನಾಟಕ-ಕಾವ್ಯ ಸಂಭ್ರಮ; ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಕವಿಗಳು ಭಾಗಿ
“ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವ ಸಂಘದ ಮಾಜಿ ಕಾರ್ಯದರ್ಶಿ ತಿಪ್ಪೇಸ್ವಾಮಿ ಅರಿವು, ಜಾಗೃತಿ ಮತ್ತು ಸಂಘಟನೆ ಕುರಿತಂತೆ ಮಾತನಾಡಲಿದ್ದಾರೆ. ಚಿತ್ರದುರ್ಗ ಶ್ರೀರಾಮ್ ಹೌಸಿಂಗ್ ಫೈನಾನ್ಸ್ ಸ್ಥಾಪಕ ಲಕ್ಷ್ಮಿ ಸಾಗರ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ವಿಶೇಷ ಆಹ್ವಾನಿತರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಮೋಸಿನ್, ಕನಕ ವಿದ್ಯಾ ಸಂಸ್ಥೆಯ ಕೃಷ್ಣಮೂರ್ತಿ, ಖಜಾಂಚಿ ಬೆನಕನಹಳ್ಳಿ ಶಿವಣ್ಣ, ಕಸಾಪ ಕಾರ್ಯದರ್ಶಿ ಚಂದ್ರು ಕಲಾವಿದ, ಪಶು ವೈದ್ಯ ತಿಪ್ಪೇಸ್ವಾಮಿ ಸನ್ಮಾನಿತರಾಗಿ ಆಗಮಿಸಲಿದ್ದಾರೆ” ವಿದ್ಯಾರ್ಥಿಗಳು, ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.