ಮಂಗಳೂರು ನಗರದ ಉರ್ವ ಸ್ಟೋರ್‌ನಲ್ಲಿ ರೂ.5 ಕೋಟಿ ವೆಚ್ಚದಲ್ಲಿನಿರ್ಮಾಣಗೊಂಡಿರುವ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯ, ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ. ದೇವರಾಜ ಅರಸು ಭವನ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿ, ದ.ಕ. ಜಿಲ್ಲೆಯಲ್ಲಿ ಸಾಕಷ್ಟು ವಿದ್ಯಾಸಂಸ್ಥೆಗಳು ಇದೆ. ಈ ಜಿಲ್ಲೆಯಲ್ಲಿಉತ್ತಮ ಶಿಕ್ಷಣ ಸಿಗುವುದರಿಂದ ಬೇರೆ ಬೇರೆ ಕಡೆಯಿಂದ ಹಲವಾರು ವಿದ್ಯಾರ್ಥಿಗಳು ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಅದರಿಂದ ಈ ಭಾಗದಲ್ಲಿ ವಸತಿ ನಿಲಯಗಳಿಗೆ ಬೇಡಿಕೆ ಹೆಚ್ಚಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಕ್ಕಿದರೇ ಸಮಾಜ ಅಭಿವೃದ್ಧಿಯಾಗಲು ಪೂರಕ ವಾತಾವರಣ ನಿರ್ಮಾಣವಾಗುತ್ತದೆ ಎಂದರು.
ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ
ಸಚಿವರು ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಪೋಷಕರು ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮಹಿಳೆಯವರು ಸಿಕ್ಕ ಅವಕಾಶ ಬಳಸಿಕೊಂಡು ಎಲ್ಲ ರಂಗದಲ್ಲೂ ತಮ್ಮದೇ ಛಾಪು ಮೂಡಿಸುತ್ತಿದಾರೆ. ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿಯೂ ಹೆಚ್ಚಿನ ಪ್ರಮಾಣದಲ್ಲಿ ಸಿಗಬೇಕಾಗಿದೆ’ ಎಂದರು.
ಇದನ್ನೂ ಓದಿ: ಮಂಗಳೂರು | ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆ
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ, ತಾಲ್ಲೂಕು ಅಧಿಕಾರಿ ಮಹಾಲಕ್ಷ್ಮಿ ಬೋಳಾರ್ ಉಪಸ್ಥಿತರಿದ್ದರು.
