ಉಡುಪಿ | ಸಂತೆಕಟ್ಟೆಯಲ್ಲಿ ಹಲಸು ಮೇಳಕ್ಕೆ ಚಾಲನೆ

Date:

Advertisements

ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಹಲಸು ಮತ್ತು ಹಣ್ಣು ಮೇಳವನ್ನು ಇಂದು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಕೆಮ್ಮಣ್ಣು ಚರ್ಚ್ ನ ಉಪಾಧ್ಯಕ್ಷರಾದ ಥಾಮಸ್ ಡಿಸೋಜಾ ಹಲಸು ಮೇಳವನ್ನು ಉದ್ಘಾಟಿಸಿದರು.

ಇಂದು ಮತ್ತು ನಾಳೆ ನಡೆಯಲಿರುವ ಈ ಹಲಸು ಮೇಳದಲ್ಲಿ ಮುಖ್ಯವಾಗಿ ಆಂಧ್ರದಿಂದ ತರಿಸಲಾದ ಏಕದಶಿ, ರುದ್ರಾಕ್ಷಿ, ಕೇಸರ್, ಚಂದ್ರ ಹಲಸು ವಿಶೇಷವಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಖಾದ್ಯಗಳ ನೂರಾರು ಮಳಿಗೆಗಳಿದ್ದು, ಬಟರ್‌ಫ್ರೂಟ್, ನೇರಳೆ ಸೇರಿದಂತೆ ವಿವಿಧ ಹಣ್ಣುಗಳು ಮೇಳದಲ್ಲಿ ಎಲ್ಲರನ್ನೂ ಆಕರ್ಷಿಸುತ್ತಿದೆ.

1006387317

ಹಲಸು ಮೇಳದ ಸಂಯೊಜಕರಾದ ಮಹಮ್ಮದ್ ಮುಕ್ತಾರ್ ಹುಸೈನ್ ಮಾತನಾಡಿ, ಎರಡು ದಿನ ಹಲಸು ಮೇಳ ‌ನಡೆಯಲಿದ್ದು ಈಗಾಗಲೇ ದೂರ ದೂರದಿಂದ ಜನರು ಮೇಳಕ್ಕೆ ಆಗಮಿಸುತ್ತಿದ್ದಾರೆ‌. ಬೆಳಗ್ಗಿನಿಂದಲೇ ನೂರಾರು ಜನರು ಹಲಸು ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಾಳೆ ಸಂಜೆ ಈ ಮೇಳದ ಸಮಾರೋಪ ನಡೆಯಲಿದ್ದು, ಹಿರಿಯ ಉದ್ಯಮಿ ಹಾಗೂ ಕೃಷಿಕರನ್ನು ಸನ್ಮಾನಿಸಲಾಗುವುದು. ಮೇಳದಲ್ಲಿ ಏಳು ವರ್ಷದೊಳಗಿನ ಮಕ್ಕಳು ಹಲಸು ತಿನ್ನುವ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು.

Advertisements

ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯೆ ಜ್ಯೋತಿ ಬರೆಟ್ಟೋ ಕೆಮ್ಮಣ್ಣು ಚರ್ಚ್ ಪಾಲನ ಮಂಡಳಿಯ ಸದಸ್ಯ ಸುಝೀ ಫರ್ನಾಡಿಸ್ ಉಪಸ್ಥಿತರಿದ್ದರು.

1006387313
1006387308
1006387310
1006387311
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X