ಉಡುಪಿ | ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

Date:

Advertisements

ಉಡುಪಿ ಜಿಲ್ಲೆಯಾದ್ಯಂತ 9/11 ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಸರಕಾರದ ವಿಳಂಬ ಧೋರಣೆಯಿಂದ ಜನಸಾಮಾನ್ಯರು ಅತೀವ ತೊಂದರೆಗೀಡಾಗಿದ್ದು, ಈ ಜ್ವಲoತ ಸಮಸ್ಯೆಯ ಪರಿಹಾರಕ್ಕೆ ಅಗ್ರಹಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಎಲ್ಲಾ ಮೋರ್ಚಾಗಳು ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಜು.28ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಬಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ 25 ಸೆಂಟ್ಸ್ ಸ್ಥಿರಾಸ್ತಿಯ ಏಕ ವಿನ್ಯಾಸ ನಕ್ಷೆಗೆ ಗ್ರಾಮ ಪಂಚಾಯತ್ ನಲ್ಲಿಯೇ ಅನುಮೋದನೆ ಹಾಗೂ 1 ಎಕ್ರೆಯವರೆಗೆ ಆಯಾ ತಾಲೂಕು ಪಂಚಾಯತ್ ಪಂಚಾಯತ್ ಗಳಲ್ಲಿಯೇ ಅನುಮೋದನೆ ದೊರೆಯುವ ವ್ಯವಸ್ಥೆ ಚಾಲ್ತಿಯಲ್ಲಿತ್ತು. ಆದರೆ ಪ್ರಸಕ್ತ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆದೇಶದ ಮೇರೆಗೆ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಎಲ್ಲಾ ಕಡತಗಳನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿರುವ ಗ್ರಾಮಾಂತರ ಪ್ರಾಧಿಕಾರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕಳುಹಿಸಿ ಅನುಮೋದನೆ ಪಡೆಯಬೇಕಾದ ಅವ್ಯವಸ್ಥೆ ಜಾರಿಗೆ ಬಂದಿದೆ. ಈ ಅವೈಜ್ಞಾನಿಕ ಆದೇಶದಿಂದ ಜಿಲ್ಲೆಯಾದ್ಯಂತ ಜನತೆ ಗ್ರಾಮಾಂತರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಗೆ ಅದೆಷ್ಟು ಬಾರಿ ಅಲೆದಾಡಿದರೂ ಸಮಸ್ಯೆಗೆ ಪರಿಹಾರ ದೊರಕುತ್ತಿಲ್ಲ.

Advertisements

ಕಳೆದ ವರ್ಷ ಗ್ರಾಮಾಂತರ ಪ್ರಾಧಿಕಾರದಲ್ಲಿ ಸುಮಾರು ಹತ್ತು ಸಾವಿರದಷ್ಟು ಅರ್ಜಿಗಳು ವಿಲೇವಾರಿಗೊಂಡರೆ ಚಾಲ್ತಿ ವರ್ಷದಲ್ಲಿ ಕೇವಲ ಒಂದು ಸಾವಿರದಷ್ಟು ಅರ್ಜಿಗಳು ಮಾತ್ರ ವಿಲೇವಾರಿಗೊಂಡಿವೆ ಎಂಬ ಮಾಹಿತಿ ಇದೆ. ಗ್ರಾಮಾoತರ ಪ್ರಾಧಿಕಾರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ತಮ್ಮ ಸ್ವಂತ ಸ್ಥಿರಾಸ್ತಿಯಲ್ಲಿ ತಮ್ಮದೇ ಹಣದಲ್ಲಿ ಮನೆ ಕಟ್ಟಲು ಜನತೆ ವರ್ಷಗಳಷ್ಟು ಸಮಯ ಕಾಯಬೇಕಾದ ಅನಿವಾರ್ಯತೆಗೆ ಈ ಜನ ವಿರೋಧಿ ಸರಕಾರದಿಂದ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸದ್ರಿ ಅವ್ಯವಸ್ಥೆಯನ್ನು ಸರಿಪಡಿಸಲು ಪುನಃ ಏಕ ವಿನ್ಯಾಸ ನಕ್ಷೆ ಅನುಮೋದನೆಯ ಜವಾಬ್ದಾರಿಯನ್ನು ಆಯಾ ಗ್ರಾಮ ಪಂಚಾಯತ್ ಗಳಿಗೆ ಮತ್ತು ತಾಲೂಕು ಪಂಚಾಯತ್ ಗಳಿಗೆ ವಹಿಸಿ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿರುವ ಎಲ್ಲ ಬಾಕಿ ಅರ್ಜಿಗಳನ್ನು ಕೂಡಲೇ ವಿಲೇವಾರಿಗೊಳಿಸಬೇಕೆಂಬ ಆಗ್ರಹದೊಂದಿಗೆ ಈ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜೂನ್ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಹಾಗೂ ಫೋಟೋ, ವರದಿ ಅಪ್ಲೋಡ್ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನವನ್ನು ಗಳಿಸಲು ಶ್ರಮಿಸಿರುವ ಎಲ್ಲರನ್ನೂ ಅಭಿನಂದಿಸಿದರು ಹಾಗೂ ಜು.27ರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮತ್ತು ವರದಿ ಅಪ್ಲೋಡ್ ಪ್ರಕ್ರಿಯೆಯಲ್ಲೂ ಉಡುಪಿ ಜಿಲ್ಲೆ ಪ್ರಥಮ ಸ್ಥಾನಿಯಾಗುವಂತೆ ಎಲ್ಲರೂ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದರು.

ಮಂಡಲ, ಮೋರ್ಚಾ ಸಮಿತಿ ರಚನೆಯ ಬಗ್ಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮಹಾ ಶಕ್ತಿ ಕೇಂದ್ರಗಳ ಸಮಿತಿ ಪುನರ್ ರಚನೆಯ ಬಗ್ಗೆ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಮನ್ ಕೀ ಬಾತ್ ವೀಕ್ಷಣೆ ಪ್ರಗತಿಯ ಕುರಿತು ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಮತ್ತು ಜು.28ರ ಪ್ರತಿಭಟನೆಯ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು ಮಾಹಿತಿ ನೀಡಿದರು.

ಜಿಲ್ಲಾ ಉಪಾಧ್ಯಕ್ಷರುಗಳಾದ ಕಿರಣ್ ಕುಮಾರ್ ಬೈಲೂರು, ಪೆರಣಂಕಿಲ ಶ್ರೀಶ ನಾಯಕ್, ಸುರೇಶ್ ಶೆಟ್ಟಿ ಕಾಡೂರು, ಜಯರಾಮ ಸಾಲ್ಯಾನ್, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಸಹಿತ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X