ಬೀದರ್‌ | ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ : ಎಸ್ಪಿ ಪ್ರದೀಪ ಗುಂಟಿ

Date:

Advertisements

ಬೀದರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ‌ ಜುಲೈ 24ರಂದು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಯಾವುದೇ ಕುರುಹು ಕಂಡಿಬಂದಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸ್ಪಷ್ಟನೆ ನೀಡಿದ್ದಾರೆ.

ʼಬಾಲಕಿಗೆ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವೈದ್ಯಾಧಿಕಾರಿಗಳು ಕುಲಂಕುಶವಾಗಿ ವೈದ್ಯಕೀಯ ತಪಾಸಣೆ ನಡೆಸಿ ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ರೀತಿಯ ಪುರಾವೆ ಕಂಡು ಬಂದಿಲ್ಲ ಎಂದು ವರದಿ ನೀಡಿದ್ದಾರೆ. ಮಗುವಿಗೆ ಆದ ಗಾಯಗಳು ಆಕಸ್ಮಿಕವಾಗಿ ಯಾವುದೋ ವಸ್ತು ಚುಚ್ಚಿದ್ದರಿಂದ ಕೇವಲ ಮೇಲ್ಭಾಗದಲ್ಲಿ ಗಾಯವಾಗಿದೆ ಎಂದು ಪ್ರಾಥಮಿಕ ಅಭಿಪ್ರಾಯ ನೀಡಿದ್ದಾರೆʼ ಎಂದು ತಿಳಿಸಿದ್ದಾರೆ.

ʼಮಗುವಿಗೆ ಮತ್ತು ಮಗುವಿನ ಪಾಲಕರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮಕ್ಕಳ ರಕ್ಷಣಾ ಘಟಕದಲ್ಲಿ ಆಪ್ತ ಸಮಾಲೋಚನೆ ನಡೆಸಿದ್ದು, ಮಗುವಿನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದ ಕುರುಹುಗಳು ಕಂಡುಬಂದಿಲ್ಲ ಎಂಬುದರ ಬಗ್ಗೆ ತನಿಖೆಯ ಎಲ್ಲ ಹಂತವನ್ನು ಮಗುವಿನ ಪೋಷಕರಿಗೆ ಕಡ್ಡಾಯವಾಗಿ ತಿಳಿಸಲಾಗುತ್ತಿದೆ. ಇನ್ನು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರೆದಿದೆʼ ಎಂದಿದ್ದಾರೆ.

ಪ್ರಕರಣದ ಸೂಕ್ಷ್ಮತೆ ಮತ್ತು ಮಗುವಿನ ಭವಿಷ್ಯದ ದೃಷ್ಟಿಯಿಂದ ಸಾರ್ವಜನಿಕರು ಮತ್ತು ಪತ್ರಕರ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಎಸ್ಪಿ ಪ್ರದೀಪ ಗುಂಟಿ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ | ನಾಳೆ ʼರಮಾಬಾಯಿ ಅಂಬೇಡ್ಕರ್‌ʼ ನಾಟಕ ಪ್ರದರ್ಶನ : ಡಾ.ಸುಜಾತಾ ಜಂಗಮಶೆಟ್ಟಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ,...

ತುಮಕೂರು ದಸರಾ ಜಂಬೂಸವಾರಿ : ಸಾಂಸ್ಕೃತಿಕ ವೈಭವ

 ತುಮಕೂರು ದಸರಾ ಉತ್ಸವದ ಅಂಗವಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ಕೊಪ್ಪಳ | ಉದಯೋನ್ಮುಖ ಕವಿಗಳು ಕವಿತೆ ರಚಿಸಲು ಆದ್ಯತೆ ನೀಡಬೇಕು: ವಿ. ಕುಲಪತಿ ಮಲ್ಲಿಕಾ ಘಂಟಿ

'ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ...

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

Download Eedina App Android / iOS

X