ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

Date:

Advertisements

ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮುಗಿದಿದ್ದು, ಸುಮಾರು 64 ಲಕ್ಷ ಅಧಿಕ ಮತದಾರರ ಹೆಸರನ್ನು ಪಟ್ಟಿಯಿಂದ ‘ಡಿಲೀಟ್’ ಮಾಡಲಾಗಿದೆ. 7.89 ಕೋಟಿ ಮತದಾರರನ್ನು ಹೊಂದಿದ್ದ ಬಿಹಾರವು ಇದೀಗ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಗೆ ಸುಮಾರು 7.23 ಕೋಟಿ ಮತದಾರರನ್ನು ಹೊಂದಿರುತ್ತದೆ ಎಂದು ವರದಿಯಾಗಿದೆ.

ಜೂನ್ 24ರಿಂದ ಜುಲೈ 25ರವರೆಗೆ ಒಂದು ತಿಂಗಳ ಅವಧಿಯಲ್ಲಿ ನಡೆಸಿದ ಎಸ್‌ಐಆರ್ ಮೂಲಕ ಸುಮಾರು 64 ಲಕ್ಷಕ್ಕೂ ಅಧಿಕ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಪೈಕಿ ಮೃತರು, ಶಾಶ್ವತವಾಗಿ ವಲಸೆ ಹೋದವರು, ಬಹು ಸ್ಥಳಗಳಲ್ಲಿ ನೋಂದಾಯಿಸಲ್ಪಟ್ಟವರು ಮತ್ತು ಪತ್ತೆಹಚ್ಚಲಾಗದವರು ಸೇರಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?

“ಸುಮಾರು 22 ಲಕ್ಷ ಮತದಾರರನ್ನು ಮೃತರೆಂದು ಘೋಷಿಸಲಾಗಿದೆ. 35 ಲಕ್ಷ ಮತದಾರರು ಶಾಶ್ವತವಾಗಿ ವಲಸೆ ಹೋಗಿದ್ದರು ಅಥವಾ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಸುಮಾರು 7 ಲಕ್ಷ ಜನರು ಬಹು ಸ್ಥಳಗಳಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ” ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈಗಾಗಲೇ ಈ ಪ್ರಕ್ರಿಯೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದೆ. ಎಲ್ಲ ದಾಖಳೆಗಳನ್ನು ಹೊಂದಿರದ ಬಡವರು, ಆದಿವಾಸಿಗಳು ಮತದಾನದ ಹಕ್ಕು ಕಳೆದುಕೊಳ್ಳುತ್ತಾರೆ ಎಂಬ ಆತಂಕವನ್ನು ವಿಪಕ್ಷಗಳು ವ್ಯಕ್ತಪಡಿಸಿದೆ. ಸಿಎಎ, ಎನ್‌ಆರ್‌ಸಿ ಬದಲು ಪೌರತ್ವ ಪರಿಶೀಲಿಸುವ ಕಾರ್ಯವನ್ನು ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಮೂಲಕ ಮಾಡಿಸುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ.

ಇವೆಲ್ಲವುದರ ನಡುವೆ ಆಗಸ್ಟ್‌ ಒಂದರಿಂದ ಚುನಾವಣಾ ಆಯೋಗ ದೇಶದಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲು ಮುಂದಾಗಿದೆ ಎಂದು ವರದಿಯಾಗಿದೆ. ಸದ್ಯ ಬಿಹಾರದಲ್ಲಿ ಡಿಜಿಟಲೀಕರಣಗೊಳ್ಳಲಿರುವ ಈ ಪರಿಷ್ಕೃತ ಪಟ್ಟಿಯಲ್ಲಿ ಅಸ್ತಿತ್ವದಲ್ಲಿರುವ 7,89,69,844 ಮತದಾರರ ಬದಲಿಗೆ 7.23 ಕೋಟಿ ಮತದಾರರ ಹೆಸರುಗಳಿವೆ. ಈ ಎಲ್ಲಾ ಅರ್ಹ ಮತದಾರರು ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ಒಂದು ತಿಂಗಳ ಅವಧಿಯಲ್ಲಿ ಯಾವುದೇ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಈಗಾಗಲೇ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನೂ ಪರಿಷ್ಕರಣೆಯ ದಾಖಲೆಯಾಗಿ ಪರಿಗಣಿಸುವಂತೆ ಸೂಚನೆ ನೀಡಿದ್ದ ಸುಪ್ರೀಂ ಕೋರ್ಟ್‌ ಸೋಮವಾರ ಅರ್ಜಿ ವಿಚಾರಣೆ ನಡೆಸಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ಭಾರತದಲ್ಲಿ ಪ್ರತಿ ಗಂಟೆಗೆ ಓರ್ವ ರೈತ ಆತ್ಮಹತ್ಯೆ: NCRB ವರದಿ

ಭಾರತದಲ್ಲಿನ ಅಪರಾಧ ಪ್ರಕರಣಗಳ ಕುರಿತಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)...

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು....

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X