ಗಂಡು ಮಗುವಿಗೆ ಜನ್ಮ ನೀಡಿದ ಕೆಲವೇ ಕ್ಷಣಗಳಲ್ಲಿ ತಾಯಿ ಮೃತಪಟ್ಟಿರುವ ಘಟನೆ ಭಾನುವಾರ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜೇವರ್ಗಿ ತಾಲ್ಲೂಕಿನ ನರಿಬೋಳ ಗ್ರಾಮದ ಶ್ರಿದೇವಿ (22) ಮೃತರು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಹೆರಿಗೆಗೆಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಶ್ರಿದೇವಿ ಅವರಿಗೆ ಭಾನುವಾರ ಬೆಳಗ್ಗೆ ಸಾಮಾನ್ಯ ಹೆರಿಗೆಯಾಗಿ ಗಂಡು ಮಗು ಜನಿಸಿತ್ತು. ಆದರೆ ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ರಕ್ತದೊತ್ತಡದಿಂದ ಎಂದು ವೈದ್ಯರು ಹೇಳಿದ್ದರು ಎನ್ನಲಾಗಿದೆ.
ʼಸಕಾಲಕ್ಕೆ ಚಿಕಿತ್ಸೆ ನೀಡದೇ ವೈದ್ಯರು ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಪತ್ನಿ ಸಾವನ್ನಪ್ಪಿದ್ದಾಳೆ ಎಂದು ಪತಿ ಹಾಗೂ ಮೃತರ ಕುಟುಂಬಸ್ಥರು ಜಿಮ್ಸ್ ವೈದ್ಯರ ವಿರುದ್ದ ಆರೋಪ ಮಾಡಿದ್ದಾರೆ.