ಭದ್ರಾವತಿಯಲ್ಲಿ,ನೆನ್ನೆ ದಿವಸ ಗಾಂಜಾ ಸೇವನೆ ಮಾಡಿದ್ದ ಆರೋಪದ ಮೇರೆಗೆ ಓರ್ವನ ವಿರುದ್ದ ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಬ್ ಇನ್ಸ್’ಪೆಕ್ಟರ್ ರಮೇಶ್ ಅವರು ಗಸ್ತಿನಲ್ಲಿದ್ದ ವೇಳೆ, ಆಂಜನೇಯ ಆಗ್ರಹಾರದ ಬಳಿಯ ರಸ್ತೆಯಲ್ಲಿ ವ್ಯಕ್ತಿಯೋರ್ವ ಅಮಲಿನಲ್ಲಿ ಓಡಾಡುತ್ತಿದ್ದುದು ಕಂಡುಬಂದಿದೆ.
ಈ ವ್ಯಕ್ತಿ ಸಾರ್ವಜನಿಕರಿಗೆ ಉಪಟಳ ನೀಡಬಹುದೆಂಬ ಸಾಧ್ಯತೆ ಮೇರೆಗೆ ಆತನನ್ನು ವಶಕ್ಕೆ ಪಡೆದು, ಸರ್ಕಾರಿ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ.
ಈ ವೇಳೆ ಆಪಾದಿತನು ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.