ಭದ್ರಾವತಿಯಲ್ಲಿ ಭದ್ರಾ ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಭದ್ರಾವತಿ ನಗರದ ಮೂಲಕ ಹಾದು ಹೋಗಿರುವ ಭದ್ರಾ ನದಿಯು ಮೈದುಂಬಿ ಹರಿಯಲಾರಂಭಿಸಿದೆ. ಜೊತೆಗೆ ಪ್ರವಾಹ ಭೀತಿ ಸೃಷ್ಟಿಸಿದೆ.
ಇಂದು ಭಾನುವಾರ ಬೆಳಿಗ್ಗೆ ಹೊಸ ಸೇತುವೆ ಮೇಲೆ ನದಿ ನೀರು ಹರಿಯುತ್ತಿದೆ. ಈ ಕಾರಣದಿಂದ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಬದಲಿ ಮಾರ್ಗದ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಪ್ರವಾಹ ಭೀತಿ ಸೃಷ್ಟಿಸಿದೆ.
‘ಕವಲುಗುಂದಿಯಲ್ಲಿ ಸುಮಾರು 15 ಮನೆಗಳಿಗೆ ನೀರು ನುಗ್ಗಿದೆ. ಸ್ಥಳೀಯ ನಿವಾಸಿಗಳನ್ನು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ನಗರಸಭೆ ಆಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್ ಅವರು ಮಾಹಿತಿ ನೀಡಿದ್ಧಾರೆ.,
ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಈಗಾಗಲೇ ನಾಗರೀಕರಿಗೆ ಸೂಕ್ತ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ಜಲಾವೃತ ಭೀತಿ :
ಭದ್ರಾ ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚಾದರೆ ಸುಣ್ಣದಹಳ್ಳಿ, ಗುಂಡೂರಾವ್ ಶೆಡ್, ಯಕಿನ್ಷಾ ಕಾಲೋನಿ ಮೊದಲಾದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಗಳಿವೆ.
ಈ ನಡುವೆ ನಗರಸಭೆ ಎಂಜಿನಿಯರ್ ಗಳಾದ ಪ್ರಸಾದ್ ಮೊದಲಾದ ಅಧಿಕಾರಿಗಳ ತಂಡ ತಗ್ಗ ಪ್ರದೇಶಗಳ ಬಡಾವಣೆಗಳಿಗೆ ನಿರಂತರವಾಗಿ ಭೇಟಿಯಿತ್ತು ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ.