ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 42 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಸಾರ್ವಜನಿಕರು ನದಿ ದಂಡೆ ಹೋಗದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.
ಮಳೆಯ ಮುನ್ಸೂಚನೆ ಕಾರಣ ಉಜ್ಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ನೀರು ಬಂದಲ್ಲಿ ಭೀಮಾ ನದಿಗೆ ಮತ್ತು ಬೆಣ್ಣೆತೋರಾ ಜಲಾಶಯದ ಮೂಲಕ ಕೆಳ ಪಾತ್ರಕ್ಕೆ ನೀರು ಬಿಡಲಾಗುತ್ತದೆ ಸಾರ್ವಜನಿಕರು ನದಿ ದಂಡೆ ಕಡೆ ಹೋಗದಂತೆ ಎಚ್ಚರಿಕೆ ವಹಿಸಬೇಕೆಂದು
ಕಲಬುರಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
