ಮುಂಗಾರು ಅಧಿವೇಶನ: ಇಂದು ಸಂಸತ್ತಿನಲ್ಲಿ ‘ಆಪರೇಷನ್‌ ಸಿಂಧೂರ’ ಕುರಿತ ಚರ್ಚೆ

Date:

Advertisements

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪುನರಾರಂಭ ಆಗಲಿದ್ದು, ಲೋಕಸಭೆಯಲ್ಲಿ ‘ಆಪರೇಷನ್‌ ಸಿಂಧೂರ’ ಕುರಿತು ಕಾವೇರಿದ ಚರ್ಚೆ ನಡೆಯಲಿದೆ.

ವಿರೋಧ ಪಕ್ಷಗಳು ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತೂ ಧ್ವನಿಯೆತ್ತುವ ನಿರೀಕ್ಷೆಗಳಿವೆ.

ರಾಜ್ಯಸಭೆಯಲ್ಲಿ ‘ಆಪರೇಷನ್‌ ಸಿಂಧೂರ’ ಕುರಿತ ಮಂಗಳವಾರ ಚರ್ಚೆಗೆ 16 ಗಂಟೆಗಳ ಕಾಲವನ್ನು ಮೀಸಲಿಡಲಾಗಿದೆ. ಎರಡೂ ಸದನಗಳಲ್ಲಿ ಈ ವಿಷಯ ಕುರಿತು ಚರ್ಚಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿರೋಧ ಪಕ್ಷಗಳು ತಮ್ಮ ಹಿರಿಯ ನಾಯಕರನ್ನು ಹೆಸರಿಸಿವೆ.

ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಭಯೋತ್ಪಾದನೆ ಮತ್ತು ‘ಆಪರೇಷನ್‌ ಸಿಂಧೂರ’ದ ಕುರಿತುಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲಿದ್ದಾರೆ. ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೂ ಮಧ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ರಾಜಕೀಯ ಮೈತ್ರಿ ಬಗ್ಗೆ ರಾಜ್‌ ಠಾಕ್ರೆ ಜೊತೆ ಉದ್ಧವ್ ಮಾತುಕತೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌, ತೃಣಮೂಲ ಕಾಂಗ್ರೆಸ್‌ನ ಅಭಿಷೇಕ್‌ ಬ್ಯಾನರ್ಜಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಸರ್ಕಾರವನ್ನು ಕಟ್ಟಿಹಾಕಲು ಪ್ರಯತ್ನಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸರ್ವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು, ಮೊದಲಿಗೆ, ‘ಆಪರೇಷನ್‌ ಸಿಂಧೂರ’ ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ವಿವರಿಸಲಿದ್ದಾರೆ. ಭಾರತ– ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ, ಕದನ ವಿರಾಮ ಮತ್ತು ಸಂಘರ್ಷ ಶಮನಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಹಿಸಿದ ಪಾತ್ರದ ಕುರಿತು ಸದನದಲ್ಲಿ ಹೇಳುವ ಸಾಧ್ಯತೆಗಳಿವೆ. ಸೇನಾ ಸಂಘರ್ಷದಲ್ಲಿ ಭಾರತ ಕಳೆದುಕೊಂಡ ಯುದ್ಧ ವಿಮಾನಗಳ ವಿವರಗಳನ್ನು ರಕ್ಷಣಾ ಸಚಿವರು ನೀಡುತ್ತಾರೆಯೇ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.

ಸದನದಲ್ಲಿ ಚರ್ಚೆಯ ವೇಳೆ ತನ್ನ ಕಾರ್ಯತಂತ್ರ ಹೇಗಿರಬೇಕು ಎಂಬುದನ್ನು ಅಂತಿಮಗೊಳಿಸಲು ವಿರೋಧ ಪಕ್ಷಗಳ ‘ಇಂಡಿಯಾ’ ಕೂಟವು ಇಂದು ಅಧಿವೇಶನಕ್ಕೂ ಮುನ್ನ ಸಭೆ ನಡೆಸಲಿದೆ ಎಂದು ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

Download Eedina App Android / iOS

X