ಸಿಎಂ ಸ್ಟಾಲಿನ್‌ಗೆ ಹಿಂದಿ ಬರುವುದಿಲ್ಲ ಎಂದ ಅಣ್ಣಾಮಲೈ; ನಮಗೆ ಮಾತೃ ಭಾಷೆ ಸಾಕು ಎಂದ ನೆಟ್ಟಿಗರು

Date:

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ಹಿಂದಿ ಅಥವಾ ಇಂಗ್ಲಿಷ್‌ ಮಾತನಾಡಲು ಬರುವುದಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿಕೆಗೆ ನೆಟ್ಟಿಗರು ಕಮಲ ಪಕ್ಷದ ರಾಜ್ಯಾಧ್ಯಕ್ಷರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

“ಸ್ಟಾಲಿನ್ ಮತ್ತು ಉದಯನಿಧಿ ಅವರಿಗೆ ಜನರೊಂದಿಗೆ ಮಾತನಾಡಲು ಬೇರೆ ಯಾವುದೇ ವಿಷಯವಿಲ್ಲ. ಪ್ರಧಾನಿ ಮೋದಿ ವಿಶ್ವ ಪ್ರವಾಸದ ವೇಳೆ ತಮಿಳು ಭಾಷೆಯ ಹೆಮ್ಮೆಯ ಬಗ್ಗೆ ಮಾತನಾಡಿದ್ದಾರೆ. ಫ್ರಾನ್ಸ್‌ನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪಿಸಲು ಹೊರಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಡಿಎಂಕೆ ಸೋಲುವುದು ಖಚಿತ’ಎಂದು ಕೆ ಅಣ್ಣಾಮಲೈ ಹೇಳಿದ್ದರು.

ಅಣ್ಣಾಮಲೈ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿರುವ ನೆಟ್ಟಿಗರು, ನಮ್ಮದು ದ್ರಾವಿಡ ಭಾಷೆ. ಹಿಂದಿ ನಮಗೆ ಅಗತ್ಯವಿಲ್ಲ. ಹಿಂದಿ ಹೋರಾಟದ ಕಿಚ್ಚು ನಮ್ಮ ರಕ್ತದಲ್ಲಿ ಅಂತರ್ಗತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಕ್ಷಿಣ ಭಾರತದ ಭಾಷೆಗಳಿಗೆ ಬಿಡಿಗಾಸು ನೀಡುವ ಕೇಂದ್ರ ಹಿಂದಿ, ಸಂಸ್ಕೃತಕ್ಕೆ ಕೋಟಿಗಟ್ಟಲೆ ನೀಡುತ್ತದೆ. ನಮ್ಮದು ವಿಶ್ವದ ಪುರಾತನ ಭಾಷೆ. ಈ ಬಗ್ಗೆ ನಿಮ್ಮ ಪಕ್ಷದ ಪ್ರಧಾನಿಯ ವಿರುದ್ಧ ಧ್ವನಿಯತ್ತೆ ಎಂದು ಆಗ್ರಹಿಸಿದ್ದಾರೆ.

ಏನಿದು ವಿವಾದ?

ಅಧಿಕೃತ ಭಾಷೆ ಕುರಿತು ಸಂಸದೀಯ ಸಮಿತಿಯ 38ನೇ ಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಹಿಂದಿಯನ್ನು ಸ್ವೀಕರಿಸುವುದು ನಿಧಾನವಾದರೂ ಅಂತಿಮವಾಗಿ ನಾವು ಅದನ್ನು ಯಾವುದೇ ವಿರೋಧವಿಲ್ಲದೆ ಸ್ವೀಕರಿಸಲೇಬೇಕು’ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಅಮಿತ್ ಶಾ ಹೇಳಿಕೆಯನ್ನು ತಮಿಳುನಾಡು ಸಿಎಂ ಸ್ಟಾಲಿನ್ ಖಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರದಲ್ಲಿ ಮೆಣಸಿನಕಾಯಿ ಇಟ್ಟು ಚಿತ್ರಹಿಂಸೆ

ಇದು ಹಿಂದಿಯೇತರ ಭಾಷಿಕರನ್ನು ಬಗ್ಗುಬಡಿಯುವ ಯತ್ನ. ತಮಿಳುನಾಡು ಯಾವುದೇ ರೀತಿಯ ಹಿಂದಿ ಪ್ರಾಬಲ್ಯ ಮತ್ತು ಹೇರಿಕೆಯನ್ನು ತಿರಸ್ಕರಿಸುತ್ತದೆ. ನಮ್ಮ ಭಾಷೆ ಮತ್ತು ಪರಂಪರೆ ನಮ್ಮನ್ನು ಗುರುತಿಸುತ್ತದೆ. ನಾವು ಹಿಂದಿಯ ಗುಲಾಮರಾಗುವುದಿಲ್ಲ. ಕರ್ನಾಟಕ, ಪಶ್ಚಿಮ ಬಂಗಾಳದಂತಹ ಹಲವು ರಾಜ್ಯಗಳು ಸಹ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿವೆ. ಮಾನ್ಯ ಅಮಿತ್ ಶಾ ಅವರೇ, ದಯವಿಟ್ಟು ಹಿಂದಿ ಹೇರಿಕೆಗೆ ಹೆಚ್ಚುತ್ತಿರುವ ಪ್ರತಿರೋಧವನ್ನು ಗಮನಕ್ಕೆ ತೆಗೆದುಕೊಳ್ಳಿ. ಬಿಜೆಪಿ ನಾಯಕರು ಅನುಸರಿಸುತ್ತಿರುವ ಸೋಗಿನ ರಾಜಕೀಯದ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿದೆ. ತಮಿಳುನಾಡಿಗೆ ಬಂದರೆ ತಮಿಳು ಭಾಷೆಗೆ ಜೇನು ತುಪ್ಪ ಹಚ್ಚುವುದು, ದೆಹಲಿಗೆ ಹೋದಾಗ ನಂಜನ್ನು ಬಿತ್ತರಿಸುವುದು ಬಿಜೆಪಿಯ ರಾಜಕಾರಣ ಎಂಬುದು ನಮಗೆಲ್ಲ ಗೊತ್ತೇ ಇದೆ’ ಎಂದು ಸ್ಟಾಲಿನ್ ಟ್ವೀಟ್‌ ಮಾಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...