ಬೀದರ್ | ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳನ್ನು ನಿರ್ಲಕ್ಷಿಸಬೇಡಿ: ಎಸ್ಪಿ ಪ್ರದೀಪ ಗುಂಟಿ

Date:

Advertisements

ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷಿಸದೆ ಪರಿಣಾಮಕಾರಿಯಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ನಡೆದ ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ರಚಿಸಿರುವ ವಿಶೇಷ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಅಪಹರಣ, ನಾಪತ್ತೆ, ಸ್ವಯಂ ಪ್ರೇರಿತವಾಗಿ ಹಾಗೂ ಪ್ರೀತಿಸಿ ಮನೆ ಬಿಟ್ಟು ಹೋದ 18 ವರ್ಷದೊಳಗಿನ ಮಕ್ಕಳು ಕಾಣೆಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಮೌಲ್ಯಮಾಪನ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. 2018 ರಿಂದ 2025ರ ಜುಲೈವರೆಗೆ ಬಾಕಿ ಉಳಿದಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸಬೇಕುʼ ಎಂದು ತಿಳಿಸಿದರು.

ʼಕಾಣೆಯಾದ ಮಕ್ಕಳ ಪೋಷಕರು, ಸಂಬಂಧಿಕರು ಹಾಗೂ ಸ್ನೇಹಿತರರನ್ನು ಸಂಪರ್ಕಿಸಿ ಮಾಹಿತಿಗಳನ್ನು ಪಡೆದು ಅವರನ್ನು ಟ್ರ‍್ಯಾಕ್ ಮಾಡಬೇಕು. ಮೊಬೈಲ್‌ನಿಂದ ಕೊನೆಯ ಕರೆಯ ಲೊಕೇಶನ್ ಟ್ರ‍್ಯಾಕಿಂಗ್ ನಡೆಸಿ ದೇಶದ ಯಾವುದೇ ಸ್ಥಳದಲ್ಲಿದ್ದರೂ ಕರೆತಂದು ಪೋಷಕರಿಗೆ ಒಪ್ಪಿಸಬೇಕು. ಮಕ್ಕಳ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ 30 ದಿನಗಳಲ್ಲಿ ಪ್ರಕರಣ ಪೂರ್ಣಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ನಿರ್ಲಕ್ಷಿಸಿದರೆ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗುವುದುʼ ಎಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಮಾತನಾಡಿ, ʼಶಾಲಾ-ಕಾಲೇಜು ಓದುತ್ತಿರುವ ಮಕ್ಕಳು ಕಾಣೆಯಾದ ಪ್ರಕರಣಗಳಲ್ಲಿ ಕಾಣೆಯಾದ ಮಕ್ಕಳ ಸ್ನೇಹಿತರನ್ನು ಭೇಟಿ ಮಾಡಿ ಅವರಿಗೆ ತಿಳಿದಿರುವ ಮಾಹಿತಿಗಳನ್ನು ಪಡೆಯಬೇಕು ಮತ್ತು ಪೋಷಕರಿಂದ ಮೂಲ ಮಾಹಿತಿಗಳನ್ನು ಪಡೆದು ಆದಷ್ಟು ಬೇಗ ಮಕ್ಕಳನ್ನು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಬೇಕುʼ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಮಾತನಾಡಿ, ʼಮಕ್ಕಳನ್ನು ಅಪಹರಣ ಮಾಡಿ ಭಿಕ್ಷಾಟನೆ, ವೇಶ್ಯವಾಟಿಕೆಯಂತಹ ಸಮಾಜದ ಕೆಟ್ಟ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಂದ ಮಕ್ಕಳನ್ನು ರಕ್ಷಿಸಿ ಅವರ ಬಾಲ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆʼ ಎಂದರು.

ಇದನ್ನೂ ಓದಿ : ಆನೆ ದಾಳಿಗೆ ಇಬ್ಬರ ಸಾವು | ಉನ್ನತಾಧಿಕಾರಿಗಳೊಂದಿಗೆ ಸಭೆ, ಆನೆ ಸೆರೆ ಹಿಡಿಯಲು ಸಚಿವ ಈಶ್ವರ ಖಂಡ್ರೆ ಸೂಚನೆ

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೋಟೆಗೌಡರ್, ಶಾಲಾ ಶಿಕ್ಷಣ ಉಪ ನಿರ್ದೇಶಕ ಸಲಿಂ ಪಾಷಾ, ಜಿಲ್ಲಾ ಮಕ್ಕಳ ಸಮಿತಿ ಅಧ್ಯಕ್ಷ ಶಿವಪ್ಪ, ಬಾಲ ನ್ಯಾಯಾಲಯ ಸದಸ್ಯೆ ಧನ್ವಂತರಿ ಸೇರಿದಂತೆ ಎನ್‌ಜಿಓಗಳ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಕಾಣೆಯಾದ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X