ಸೊರಬ | ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸಿದೆ, ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ : ಸಚಿವ ಮಧು ಬಂಗಾರಪ್ಪ

Date:

Advertisements

ಸೊರಬ, ಯಾವುದೇ ಪಕ್ಷಕ್ಕೆ ಸೇರಿದರೂ, ತಾರತಮ್ಯ ಮಾಡದೇ ಅಭಿವೃದ್ದಿ ಕಾರ್ಯಗಳನ್ನು ಮಾಡುವುದು ನಮ್ಮ ಕರ್ತವ್ಯ. ಪಕ್ಷಾತೀತವಾಗಿ ಸಮಸ್ಯೆಳನಗಳನ್ನು ಯಾರೇ ಗಮನಕ್ಕೆ ತಂದರೂ ಬಗೆಹರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಸೋರಬ ಬೆಂಗಳೂರು ನಿವಾಸಿಗಳ ‘ಟೀಮ್ ಸಮ್ಮಿಲನ’ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಾನ್ಮಾನಿಸಿ ಅವರು ಮಾತನಾಡಿದರು.

‘ಸೋರಬ ಕ್ಷೇತ್ರದ ಅಭಿವೃದ್ದಿಗಾಗಿ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಮ್ಮ ಕ್ಷೇತ್ರದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವ ಉದ್ದೇಶದಿಂದ ಎಲ್ಲ ಕೆಲಸವನ್ನು ಬದಿಗೊತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ಇದೊಂದು ಸ್ಮರಣೀಯ ಕಾರ್ಯಕ್ರಮ. ಇದನ್ನು ಹೀಗೆಯೇ ಮುಂದುವರಿಸಲಾಗುವುದು’ ಎಂದುರು.

‘ನಾವು ಎಷ್ಟು ಒಳ್ಳೆಯದನ್ನು ಮಾಡಿದರೂ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬಿಂಬಿಸುತ್ತಾರೆ. ಇತ್ತೀಚೆಗೆ ಸಿಗಂದೂರು ವಿಚಾರದಲ್ಲೂ ಹಾಗೆ ಆಯಿತು. ನಮ್ಮ ಬಗ್ಗೆ ಕೆಟ್ಟದಾಗಿ ಮಾತಾಡುವವರಿಗೆ ಮುಂದೆ ಸಿಗಂದೂರು ಚೌಡೇಶ್ವರಿಯೇ ಬುದ್ದಿ ಕಲಿಸುತ್ತಾಳೆ’ ಎಂದರು.

ಕಾರ್ಯಕ್ರಮದಲ್ಲಿ 25 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ₹15 ಸಾವಿರ ನಗದು, ಫಲಕ ನೀಡಿ ಗೌರವಿಸಲಾಯಿತು.ಸೊರಬ ನಿವಾಸಿಗಳ ಟೀಮ್ ಸಮ್ಮಿಲನದ ಮುಖ್ಯಸ್ಥ ಏಕಾಂತಪ್ಪ ಕುಮ್ಮೂರು, ವಕೀಲ ಕೇಶವಮೂರ್ತಿ ಹಾಳಗಲೆ, ದತ್ತಾತ್ರೇಯ ಬಿದರಗೆರೆ, ಕಲ್ಯಾಣ ಕುಮಾರ ತವನಂದಿ, ಶೇಖರಪ್ಪ ಹರೂರು, ಮುಕುಂದ ಹಿರೇಇಡಗೋಡು, ಗಣೇಶ್ ಹುಲ್ತಿಕೂಪ್ಪ, ಗಣಪತಿ ಹಳೆ ಸೋರಬ, ಪೀತಾಂಬರ ಕೆರೆಕೋಪ್ಪ ವಿನಾಯಕ ಗುಡ್ಡೆಮನೆ ಕೆ. ಸಿ. ಯಶವಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X