ಧರ್ಮಸ್ಥಳ ಪ್ರಕರಣ | 13 ಸ್ಥಳಗಳನ್ನು ಗುರುತಿಸಿದ ದೂರುದಾರ: ಮಹಜರು ನಾಳೆಗೆ ಮುಂದೂಡಿಕೆ

Date:

Advertisements

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಆರಂಭಿಸಿದೆ. ಇಂದು(ಜುಲೈ 28) ಸಾಕ್ಷಿ ದೂರುದಾರರನ್ನು ಕರೆತಂದು ಸ್ಥಳ ಮಹಜರು ನಡೆಸಿದ ಎಸ್‌ಐಟಿ ತಂಡ ಇನ್ನುಳಿದ ಸ್ಥಳ ಮಹಜರು ಪ್ರಕ್ರಿಯೆಯನ್ನು ನಾಳೆಗೆ ಮುಂದುವರೆಸಲಿದೆ ಎಂದು ವರದಿಯಾಗಿದೆ.

ಸೋಮವಾರ ಸಾಕ್ಷಿ ದೂರುದಾರರನ್ನು ಸ್ಥಳಕ್ಕೆ ಕರೆತಂದ ಎಸ್‌ಐಟಿ ತಂಡ ಸಂಜೆಯ ವೇಳೆ ಸ್ಥಳ ಗುರುತಿಸುವಿಕೆ ಪ್ರಕ್ರಿಯೆ ಸ್ಥಗಿತಗೊಳಿಸಿದ್ದಾರೆ. ಇನ್ನುಳಿದ ಪ್ರಕ್ರಿಯೆಯನ್ನು ಮಂಗಳವಾರಕ್ಕೆ ಮುಂದೂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರನ ಜತೆಗೆ ಸ್ಥಳ ಮಹಜರಿಗೆ ಬಂದ ಎಸ್‌ಐಟಿ ತಂಡ

ಎಸ್‌ಐಟಿ ಪೊಲೀಸರು 13 ಸ್ಥಳಗಳನ್ನು ಸಾಕ್ಷಿಯ ಸಹಾಯದಿಂದ ಗುರುತಿಸಿದ್ದಾರೆ ಎನ್ನಲಾಗಿದೆ. ಇನ್ನು ಶನಿವಾರವೇ ಎಸ್‌ಐಟಿ ತಂಡದ ಎದುರು ದೂರುದಾರರು ಹಾಜರಾಗಿದ್ದಾರೆ.

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಅದರಲ್ಲೂ ಹೆಣ್ಣುಮಕ್ಕಳು-ಮಹಿಳೆಯರನ್ನು ಅತ್ಯಾಚಾರ, ಕೊಲೆ ಮಾಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು, ಅವುಗಳನ್ನು ಹೊರತೆಗೆಯುತ್ತೇನೆಂದು, ಸಾಕ್ಷಿ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ ಎಚ್.ಪಟ್ಟಣ ಗ್ರಾಪಂ ನಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಎಂ. ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ...

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ,...

ತುಮಕೂರು ದಸರಾ ಜಂಬೂಸವಾರಿ : ಸಾಂಸ್ಕೃತಿಕ ವೈಭವ

 ತುಮಕೂರು ದಸರಾ ಉತ್ಸವದ ಅಂಗವಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

Download Eedina App Android / iOS

X