“ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿರುವುದು ನೋವಿನ ಸಂಗತಿ. ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಆದರ್ಶಗಳ ಬಗೆಗೆ ಮಾತನಾಡಿದ್ದೇವೆಯೇ ಹೊರತು, ಅನ್ಯ ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿರುವುದಿಲ್ಲ” ಎಂದು ರಂಭಾಪುರಿ ಶ್ರೀಗಳು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ದಾವಣಗೆರೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಕುರಿತು ಬಾಳೆಹೊನ್ನೂರು ರಂಭಾಪುರಿ ಶ್ರೀ ಸ್ಪಷ್ಟನೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತುಂಗಾಭದ್ರಾ ನದಿ ಅಪಾಯದ ಮಟ್ಟ; ಜನ, ಜಾನುವಾರು ನದಿಗೆ ಇಳಿಸದಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ
‘ಭದ್ರಾವತಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭದ್ರಾವತಿ ತಾಲೂಕಾ ಘಟಕದಿಂದ ಜರುಗಿದ ಸಮಾರಂಭದಲ್ಲಿ ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿದ್ದಾರೆಂದು ತಿಳಿದುಬಂದಿದೆ. ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಆದರ್ಶಗಳ ಬಗೆಗೆ ಮಾತನಾಡಿದ್ದೇವೆ ಹೊರತು ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿರುವುದಿಲ್ಲ. ದಲಿತ ಹಿಂದುಳಿದ ಮಠಾಧೀಶರು ತಪ್ಪು ಗ್ರಹಿಕೆ ಮಾಡಿಕೊಂಡು ಗೋಷ್ಠಿ ನಡೆಸಿರುವುದಕ್ಕೆ ವಿಷಾಧಿಸುತ್ತೇವೆ. ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಾಗಲಿ, ಅಲ್ಲ ಸಲ್ಲದ ಮಾತುಗಳಿಲ್ಲವೆಂಬುದನ್ನು ಸ್ಪಷ್ಟಪಡಿಸುತ್ತೇವೆ’ ಎಂದು ಸಮರ್ಥಿಸಿಕೊಂಡಿದ್ದಾರೆ.