ಯಾದಗಿರಿ | ಬಸವ ತತ್ವ ಪ್ರಸಾರದಲ್ಲಿ ಲಿಂಗಣ್ಣ ಸತ್ಯಂಪೇಟೆ ಕಾರ್ಯ ಮಹತ್ವದ್ದು

Date:

Advertisements

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬಸವಾದಿ ಶರಣರ ತತ್ವ ಪ್ರಸಾರಗೈದವರಲ್ಲಿ ಲಿಂಗಣ್ಣ ಸತ್ಯಂಪೇಟೆ ಅವರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸಿದ್ಧಲಿಂಗಣ್ಣ ಆನೇಗುಂದಿ ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ವಿಚಾರ ವೇದಿಕೆ ಸಹಯೋಗದಲ್ಲಿ ಶಹಾಪುರ ನಗರದ ಚರಬಸವೇಶ್ವರ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ ʼಲಿಂಗಣ್ಣ ಸತ್ಯಂಪೇಟೆ ಅವರ ಬದುಕು-ಬರಹ, ಹೋರಾಟ, ಪತ್ರಿಕೋದ್ಯಮʼ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಲಿಂಗಣ್ಣ ಸತ್ಯಂಪೇಟೆ ಅವರು ಬಹುಮುಖ ಪ್ರತಿಭೆಯುಳ್ಳವರಾಗಿದ್ದರು. ಪತ್ರಿಕಾ ರಂಗ, ಶರಣ ಚಿಂತನೆ ಹಾಗೂ ಜನಮುಖಿ ಚಳವಳಿಯಲ್ಲಿ ಸಕ್ರಿಯರಾಗಿ ಸಮಾಜ ಬದಲಾವಣೆಗಾಗಿ ಶ್ರಮಿಸಿದವರು. ಇಂದಿನ ಯುವ ಸಮೂಹ ಇಂತಹ ಸಾಧಕರ ಆದರ್ಶಗಳು ಮೈಗೂಡಿಸಿಕೊಳ್ಳಬೇಕುʼ ಎಂದು ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಸಿದ್ಧರಾಮ ಹೊನ್ಕಲ್ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಕುರಿತು ಹಾಗೂ ಲಿಂಗಣ್ಣ ಸತ್ಯಂಪೇಟೆ ಅವರ ಶರಣ ತತ್ವ ಪ್ರಸಾರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಾಹಿತಿ ಶಿವಣ್ಣ ಇಜೇರಿ ಅವರು ಲೇಖಕ ಲಿಂಗಣ್ಣ ಸತ್ಯಂಪೇಟೆ ಅವರೊಂದಿಗಿನ ಒಡನಾಟ ಹಾಗೂ ಅವರ ಜೀವನ ಕಥನ, ಹೋರಾಟ ಕುರಿತು ಸವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಧರ್ಮಣ್ಣಗೌಡ ಬಿರಾದಾರ ಮಾತನಾಡಿ, ʼಲಿಂಗಣ್ಣ ಸತ್ಯಂಪೇಟೆ ಅವರ ಕುಟುಂಬದೊಂದಿಗೆ ಇರುವ ಒಡನಾಟ ಕುರಿತು ವಿವರಿಸಿದರು. ಸಾಹಿತ್ಯ ಅಕಾಡೆಮಿ ಲೇಖಕ ಲಿಂಗಣ್ಣ ಸತ್ಯಂಪೇಟೆ ಅವರನ್ನು ಸ್ಮರಿಸುವ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದ್ದು ಶ್ಲಾಘನೀಯʼ ಎಂದರು.

ಇದನ್ನೂ ಓದಿ : ಬೀದರ್‌ | ಲೇಖಕರು ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಲಿ : ಗುರುಬಸವ ಪಟ್ಟದ್ದೇವರು

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ವಿಶ್ವಾರಾಧ್ಯ ಸತ್ಯಂಪೇಟೆ, ಉಪನ್ಯಾಸಕಿ‌ ನಿರ್ಮಲ‌ ತುಂಬಗಿ ಸೇರಿದಂತೆ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X