ಶಿವಮೊಗ್ಗ | ಮೊದಲ ಬಾರಿಗೆ ಯುದ್ಧ ವಿಮಾನ : ಶಾಸಕರು ಮತ್ತು ಆಯುಕ್ತರಿಂದ ಸ್ಥಳ ಪರಿಶೀಲನೆ

Date:

Advertisements

ಶಿವಮೊಗ್ಗ ನಗರಕ್ಕೆ ಮೊದಲ ಬಾರಿಗೆ ಯುದ್ಧ ವಿಮಾನವೊಂದು ಆಗಮಿಸುತ್ತಿದ್ದು, ಸಾರ್ವಜನಿಕ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಲು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರೊಂದಿಗೆ ಇಂದು ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿದರು.

ಯುದ್ಧ ವಿಮಾನ ಪ್ರದರ್ಶನಕ್ಕೆ ಸೂಕ್ತ ಸ್ಥಳ ನಿಗದಿ, ಸಾರ್ವಜನಿಕರ ಸುಗಮ ವೀಕ್ಷಣೆಗೆ ಅಗತ್ಯ ವ್ಯವಸ್ಥೆಗಳು, ಭದ್ರತೆ ಹಾಗೂ ಇತರೆ ಮಹತ್ವದ ಅಂಶಗಳ ಕುರಿತು ಸಮಾಲೋಚನೆ ನಡೆಸಿದರು.

ಮುಂಬರುವ ಯುದ್ಧ ವಿಮಾನದ ಪ್ರದರ್ಶನವನ್ನು ಯಶಸ್ವಿಗೊಳಿಸಲು ಬೇಕಾದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸಿದ್ಧತೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಈಗಾಗಲೇ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಸೇನೆ ಬಳಸುತ್ತಿದ್ದ ಯುದ್ಧ ಟ್ಯಾಂಕರ್ ಅನ್ನು ಸ್ಥಾಪಿಸಲಾಗಿದೆ. ಇದರ ಸನಿಹದಲ್ಲೇ ಯುದ್ಧ ವಿಮಾನ ಸ್ಥಾಪಿಸುವ ಕುರಿತು ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X