ದ.ಕ. | ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಿ: ನ್ಯಾಯಾಧೀಶ ಜೈಶಂಕರ್

Date:

Advertisements

ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ  ಹಾಗೂ ನ್ಯಾಯಾಧೀಶ  ಜೈಶಂಕರ್ ಅವರು ತಿಳಿಸಿದರು.

ಅವರು ಸೋಮವಾರ ಜನತಾ ನ್ಯಾಯಾಲಯ ಕಚೇರಿಯಲ್ಲಿ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ ದಾಖಲು ಪ್ರಕ್ರಿಯೆ ಅತ್ಯಂತ ಸರಳವಾಗಿದ್ದು ಅತಿ ಕಡಿಮೆ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥ ಪಡಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ದ.ಕ. | ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್: ಸಂಸದ ಚೌಟ

ಖಾಯಂ ಜನತಾ ನ್ಯಾಯಾಲಯವು ಪರ್ಯಾಯ ಪರಿಹಾರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರೇ ಸೇವೆಯಲ್ಲಿರುತ್ತಾರೆ. ಸರಳ ದಾಖಲೆ ಪ್ರಕ್ರಿಯೆ ಮತ್ತು ಅಗತ್ಯವಿದ್ದರೆ ಮಾತ್ರ ಸಾಕ್ಷಿ ವಿಚಾರಣೆ ನಡೆಯಲಿದೆ. ಯಾವುದೇ ನ್ಯಾಯಾಲಯ ಶುಲ್ಕ ಇರುವುದಿಲ್ಲ ಎಂದು ತಿಳಿಸಿದರು. ಸಾರಿಗೆ ಸೇವೆ, ಅಂಚೆ, ವಿದ್ಯುತ್, ಬ್ಯಾಂಕಿಂಗ್ ಮತ್ತು  ಹಣಕಾಸು ಸಂಸ್ಥೆ, ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್, ವಿಮೆ, ವೈದ್ಯಕೀಯ ನಿರ್ಲಕ್ಷ್ಯತೆ ಮತ್ತಿತರ ಪ್ರಕರಣಗಳನ್ನು ಇಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | 13 ಸ್ಥಳಗಳನ್ನು ಗುರುತಿಸಿದ ದೂರುದಾರ: ಮಹಜರು ನಾಳೆಗೆ ಮುಂದೂಡಿಕೆ

ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ವಿವಿಧ ಸಾಲ ಸಂಬಂಧಿತ ವ್ಯಾಜ್ಯಗಳನ್ನು ಇಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ. ಇಲ್ಲಿನ ಆದೇಶವು ಅಂತಿಮವಾಗಿದ್ದು, ಮೇಲ್ಮನವಿಗೆ ಅವಕಾಶವಿಲ್ಲ. ರೂ.1 ಕೋಟಿವರೆಗಿನ ಮೊತ್ತದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಗೊಳಿಸಲಾಗುತ್ತದೆ. ಅತಿ ಸಣ್ಣ ಮೊತ್ತದ ಪ್ರಕರಣಗಳನ್ನು ಕೂಡಾ ಇಲ್ಲಿ ದಾಖಲಿಸಬಹುದು ಎಂದು ಹೇಳಿದರು. ಖಾಯಂ ಜನತಾ ನ್ಯಾಯಾಲಯವು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 6ನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದೆ. ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ವ್ಯಾಪ್ತಿಯನ್ನು ಹೊಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಂಗಳೂರು | ಮಾದಕ ದ್ರವ್ಯ ಸೇವನೆ; ಮೂವರ ಬಂಧನ

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಜೈಬುನ್ನೀಸಾ, ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ಫಜಲ್ ರಹೀಮ್, ಲಾವಣ್ಯ  ರೈ ಹೆಗ್ಡೆ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X