ನ್ಯೂಯಾರ್ಕ್ ನಗರದ ಕಚೇರಿ ಗೋಪುರದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ಕರ್ತವ್ಯ ನಿರತ ನ್ಯೂಯಾರ್ಕ್ ನಗರದ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಹತ್ಯೆಗೀಡಾದ ಅಧಿಕಾರಿ 36 ವರ್ಷದ ದಿದರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಇವರು ಬಾಂಗ್ಲಾದೇಶದ ವಲಸೆ ನ್ಯೂಯಾರ್ಕ್ ನಗರದಲ್ಲಿ ಮೂರುವರೆ ವರ್ಷಗಳಿಂದ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಪೊಲೀಸ್ ಆಯುಕ್ತರು ಜೆಸ್ಸಿಕಾ ಟಿಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ರಿಯಾಸಿ ದಾಳಿ| ಉಗ್ರರು 20 ನಿಮಿಷಗಳ ಕಾಲ ಗುಂಡು ಹಾರಿಸಿದ್ದರು: ಮಾಜಿ ಸರಪಂಚ್
ಇನ್ನು ಲಾಸ್ ವೇಗಾಸ್ನ ಶೇನ್ ಟಮುರಾ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ, ಆತನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನಿಗೆ ಮಾನಸಿಕ ಖಿನ್ನತೆ ಇತ್ತು ಎಂಬುದು ತಿಳಿದುಬಂದಿದೆ. ಆದರೆ ಈ ರೀತಿ ಗುಂಡಿನ ದಾಳಿ ನಡೆಸಲು ಕಾರಣ ಏನೆಂಬುದು ತಿಳಿದಿಲ್ಲ ಎಂದು ಜೆಸ್ಸಿಕಾ ಟಿಶ್ ಹೇಳಿದ್ದಾರೆ.
“ಯಾವ ಕಾರಣಕ್ಕೆ ಹೀಗೆ ಮಾಡಿದ್ದಾನೆ ಮತ್ತು ಇದುವೇ ಸ್ಥಳವನ್ನು ಯಾಕೆ ಆಯ್ಕೆ ಮಾಡಿಕೊಂಡಿದ್ದಾನೆ ಎಂಬುದನ್ನು ತಿಳಿಯಲು ನಾವು ತನಿಖೆ ನಡೆಸುತ್ತಿದ್ದೇವೆ” ಎಂದೂ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಇನ್ನು ಈ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಸ್ಥಿತಿ ಗಂಭೀರವಾಗಿದೆ. ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಇತರ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಮೇಯರ್ ಎರಿಕ್ ಆಡಮ್ಸ್ ಹೇಳಿದರು.
ಶೇನ್ ಟಮುರಾ ಕಾರಿನಿಂದ ಇಳಿದು M4 ರೈಫಲ್ ಹಿಡಿದು ಕಟ್ಟಡದ ಒಳಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಪೊಲೀಸ್ ಇಲಾಖೆ ಅಧಿಕಾರಿ ಕಟ್ಟಡವನ್ನು ಪ್ರವೇಶಿಸಿದಾಗ ತಕ್ಷಣವೇ ಅವರ ಮೇಲೆ ಗುಂಡು ಹಾರಿಸಿದ್ದಾನೆ. ತನ್ನನ್ನು ತಾನು ರಕ್ಷಿಸಿಕೊಳ್ಳಲು ಯತ್ನಿಸಿದ ಮಹಿಳೆಗೂ ಗುಂಡು ಹಾರಿಸಿದ್ದಾನೆ. ಬಳಿಕ ಲಾಬಿಯ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದಾನೆ, ಲಾಬಿಯಲ್ಲಿದ್ದ ಇನ್ನೊಬ್ಬ ವ್ಯಕ್ತಿಯನ್ನು ಗುಂಡು ಹಾರಿಸಿದ್ದಾನೆ. ಬಳಿಕ 33ನೇ ಮಹಡಿಗೆ ಲಿಫ್ಟ್ನಲ್ಲಿ ಹೋಗಿ ರಿಯಲ್ ಎಸ್ಟೇಟ್ ನಿರ್ವಹಣಾ ಕಂಪನಿಗೆ ಹೋಗಿ ಅಲ್ಲಿ ಓರ್ವ ವ್ಯಕ್ತಿಯನ್ನು ಗುಂಡು ಹಾರಿಸಿ ಕೊಂದು ತಾನೂ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಆಯುಕ್ತರು ಹೇಳಿದ್ದಾರೆ.
